Advertisement

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

06:26 PM Oct 06, 2024 | Team Udayavani |

ಹೊಸದಿಲ್ಲಿ: ಇಂದು ರಷ್ಯಾ ಮತ್ತು ಉಕ್ರೇನ್ ನೊಂದಿಗೆ ಮಾತುಕತೆಯಲ್ಲಿ ತೊಡಗಿಸಿಕೊಳ್ಳಬಲ್ಲ ವಿಶ್ವದ ಕೆಲವೇ ಕೆಲವು ನಾಯಕರಲ್ಲಿ ಪ್ರಧಾನಿ ಮೋದಿ ಒಬ್ಬರು ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ರವಿವಾರ(ಅ6) ಹೇಳಿದ್ದಾರೆ.

Advertisement

ಭಾನುವಾರ ಕೌಟಿಲ್ಯ ಆರ್ಥಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ವಿದೇಶಾಂಗ ಸಚಿವ ಜೈಶಂಕರ್ ‘ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗಿನ ಇತ್ತೀಚಿನ ಸಭೆಗಳನ್ನು ಉಲ್ಲೇಖಿಸಿ, ಸಂಘರ್ಷದಲ್ಲಿ ಉಭಯ ದೇಶಗಳ ನಡುವೆ ಒಮ್ಮುಖದ ಬಿಂದುವನ್ನು ಕಂಡುಕೊಳ್ಳುವ ಪ್ರಯತ್ನದಲ್ಲಿ ಭಾರತ ವಹಿಸಿದ ಪಾತ್ರವನ್ನು ಒತ್ತಿ ಹೇಳಿದರು.

“ಉಕ್ರೇನ್‌ಗೆ ಸಂಬಂಧಿಸಿದಂತೆ, ಕಳೆದ ಕೆಲವು ತಿಂಗಳುಗಳಲ್ಲಿ, ಪ್ರಧಾನಿ ಮೋದಿ ಅಧ್ಯಕ್ಷ ಝೆಲೆನ್ಸ್ಕಿ ಅವರನ್ನು ಮೂರು ಬಾರಿ ಭೇಟಿಯಾದರು. ಒಮ್ಮೆ ಅವರು ರಷ್ಯಾದ ಅಧ್ಯಕ್ಷ ಪುಟಿನ್ ಅವರನ್ನೂ ಭೇಟಿಯಾದರು. ಅವರೊಂದಿಗೆ ಹೆಚ್ಚಾಗಿ ಮಾತನಾಡುತ್ತಿದ್ದಾರೆ ಮತ್ತು ಎನ್‌ಎಸ್‌ಎ (ರಾಷ್ಟ್ರೀಯ ಭದ್ರತಾ ಸಲಹೆಗಾರ) ಮತ್ತು ನಾನು, ನಾವು ಸಂಪರ್ಕದಲ್ಲಿದ್ದೇವೆ ” ಎಂದು ಜೈಶಂಕರ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next