Advertisement
ರಾಜ್ಯದಿಂದ ವಿವಿಧ ಜಿಲ್ಲೆಗಳ 60 ವಿದ್ಯಾರ್ಥಿಗಳು, 12 ಜನ ಪೋಷಕರು ಮತ್ತು 12 ಮಂದಿ ಶಿಕ್ಷಕರು ಸೇರಿದಂತೆ ಒಟ್ಟು 84 ಮಂದಿ ಮೋದಿ ಅವರ ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಮೈಸೂರಿನ ಜವಾಹರ್ ನವೋದಯ ವಿದ್ಯಾಲಯದ ವಿದ್ಯಾರ್ಥಿ ಎಂ.ಬಿ. ತರುಣ್ ಕೂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪರೀಕ್ಷೆ ಸಂಬಂಧಿಸಿದಂತೆ ಪ್ರಶ್ನೆ ಕೇಳಿರುವುದು ವಿಶೇಷ. ಮಂಡ್ಯ ಮೂಲದ ಎಂ.ಬಿ. ತರುಣ್ ಮೈಸೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ 11ನೇ ತರಗತಿಯಲ್ಲಿ ಓದುತ್ತಿದ್ದಾನೆ ಎಂದು ಕೇಂದ್ರ ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಕ್ಕಳಲ್ಲಿನ ಪರೀಕ್ಷಾ ಆತಂಕದ ಬಗ್ಗೆMY GOV ವೇದಿಕೆಯ ಮೂಲಕ ಡಿ. 28, 2021ರಿಂದ ಫೆ. 3ರ ವರೆಗೆ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಇದರಲ್ಲಿ 15.7 ಲಕ್ಷ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಂಸಾ ಪತ್ರ ಕೂಡ ನೀಡಲಾಗುತ್ತದೆ. ಜತೆಗೆ “ಪರೀಕ್ಷಾ ಯೋಧರು” ವಿಶೇಷ ಪುಸ್ತಕ ಹೊಂದಿರುವ ಪರೀಕ್ಷಾ ಪೇ ಚರ್ಚಾ ಕಿಟ್ಟನ್ನು ಕೂಡ ವಿತರಣೆ ಮಾಡಲಾಗುತ್ತದೆ. ಇದನ್ನೂ ಓದಿ:ವಿಧಾನ ಮಂಡಲ ಅಧಿವೇಶನ ಅನಿರ್ಧಿಷ್ಠಾವಧಿಗೆ ಮುಂದೂಡಿಕೆ
Related Articles
ಪ್ರಧಾನಿ ನರೇಂದ್ರ ಮೋದಿ ಅವರ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಎ. 1ರ ಬೆಳಗ್ಗೆ 11 ಗಂಟೆಗೆ ರಾಜ್ಯಭವನದಲ್ಲಿ ನಡೆಯಲಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಹೇಳಿದ್ದಾರೆ.
Advertisement
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಿಂದ ಓರ್ವ ವಿದ್ಯಾರ್ಥಿಗೆ ಮಾತ್ರ ಪ್ರಶ್ನೆ ಕೇಳುವ ಅವಕಾಶ ಸಿಕ್ಕಿದ್ದು, ಮೈಸೂರಿನ ಜವಾಹರ್ ನವೋದಯ ವಿದ್ಯಾಲಯದ 11ನೇ ತರಗತಿಯ ವಿದ್ಯಾರ್ಥಿ ತರುಣ್ ಪ್ರಶ್ನೆ ಕೇಳುವುದಕ್ಕೆ ಆಯ್ಕೆಯಾದ ವಿದ್ಯಾರ್ಥಿಯಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಪರೀಕ್ಷಾ ಭಯ ದೂರಯುವ ಜನತೆಗೆ ಒತ್ತಡ ರಹಿತ ವಾತಾವರಣ ನಿರ್ಮಿಸಲು ಪರೀಕ್ಷಾ ಯೋಧರು ಅಭಿಯಾನವನ್ನು ಕೈಗೆತ್ತಿಕೊಳ್ಳಲಾಗಿದೆ. ಪರೀಕ್ಷೆ ವೇಳೆ ವಿದ್ಯಾರ್ಥಿಗಳಲ್ಲಿ ಒತ್ತಡ ಮತ್ತು ಆತಂಕ ಇದ್ದೇ ಇರುತ್ತದೆ. ಈ ಸಂದರ್ಭ ನೇರವಾಗಿ ಪ್ರಧಾನಿಗಳೇ ಮಕ್ಕಳೊಂದಿಗೆ ಚರ್ಚೆ ನಡೆಸುವುದರಿಂದ ಮಕ್ಕಳಲ್ಲಿ ಪರೀಕ್ಷಾ ಭಯ ದೂರವಾಗಲಿದೆ. ವ್ಯಕ್ತಿತ್ವ ವಿಕಸನಕ್ಕೂ ಕಾರಣವಾಗಲಿದೆ ಎಂದವರು ಹೇಳಿದ್ದಾರೆ.