ಹೊಸದಿಲ್ಲಿ: ಇಂದು ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನೇತಾಜಿ ಬೋಸ್ ಅವರಿಗೆ ಗೌರವ ಸಲ್ಲಿಸಿದರು.
“ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯಂದು ನಾನು ಅವರಿಗೆ ನಮಸ್ಕರಿಸುತ್ತೇನೆ. ನಮ್ಮ ದೇಶಕ್ಕೆ ಅವರ ಕೊಡುಗೆಯ ಬಗ್ಗೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುತ್ತಾನೆ.” ಟ್ವಿಟರ್‌ನಲ್ಲಿ ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ.
ಇಂದು ಸಂಜೆ 6 ಗಂಟೆಗೆ ಇಂಡಿಯಾ ಗೇಟ್‌ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹೊಲೊಗ್ರಾಮ್ ಪ್ರತಿಮೆಯನ್ನು ಪ್ರಧಾನಿ ಸ್ಥಾಪಿಸಲಿದ್ದಾರೆ.
ಇದನ್ನೂ ಓದಿ:ಭಾರತದ ಅತಿ ಎತ್ತರದ ವ್ಯಕ್ತಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ
“ಇಡೀ ರಾಷ್ಟ್ರವು ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125 ನೇ ಜನ್ಮ ವಾರ್ಷಿಕೋತ್ಸವದ ಈ ಸಮಯದಲ್ಲಿ, ಗ್ರಾನೈಟ್‌ನಿಂದ ಮಾಡಲ್ಪಟ್ಟ ಅವರ ಭವ್ಯವಾದ ಪ್ರತಿಮೆಯನ್ನು ಇಂಡಿಯಾ ಗೇಟ್‌ನಲ್ಲಿ ಸ್ಥಾಪಿಸಲಾಗುವುದು ಎಂಬ ವಿಚಾರ ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ”ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಆಜಾದ್ ಹಿಂದ್ ಫೌಜ್ ಸಂಸ್ಥಾಪಕರ ಜನ್ಮದಿನದ ಅಂಗವಾಗಿ ತಮ್ಮ ಸರ್ಕಾರ ಘೋಷಿಸಿದ ‘ಪರಾಕ್ರಮ್ ದಿವಸ್’ ದಿನದಂದು ಪ್ರಧಾನಿ ಮೋದಿ ಜನರಿಗೆ ಶುಭಾಶಯ ಕೋರಿದರು.
ನೇತಾಜಿಯವರು ತಮ್ಮ ಅಸಾಧಾರಣ ದೇಶಭಕ್ತಿ, ಅದಮ್ಯ ಧೈರ್ಯ ಮತ್ತು ಪರಕೀಯರ ಆಳ್ವಿಕೆಯ ಬುನಾದಿಯನ್ನು ಅಲುಗಾಡಿಸುವ ಅದ್ಭುತ ಭಾಷಣದಿಂದ ಯುವಕರನ್ನು ಸಂಘಟಿಸಿದ್ದರು ಎಂದು ಗೃಹ ಸಚಿವ ಅಮಿತ್ ಶಾ ಶ್ಲಾಘಿಸಿದರು.