Advertisement

Jawaharlal Nehru ಪುಣ್ಯತಿಥಿ: ಪ್ರಧಾನಿ ಮೋದಿ, ಮಲ್ಲಿಕಾರ್ಜುನ ಖರ್ಗೆ ಸೇರಿ ಗಣ್ಯರಿಂದ ನಮನ

01:19 PM May 27, 2023 | Team Udayavani |

ನವದೆಹಲಿ: ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ 59ನೇ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ ಮೋದಿ ,ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಶನಿವಾರ ಶ್ರದ್ಧಾಂಜಲಿ ಸಲ್ಲಿಸಿದರು.

Advertisement

ದೆಹಲಿಯ ಶಾಂತಿವನದಲ್ಲಿರುವ ನೆಹರೂ ಸ್ಮಾರಕಕ್ಕೆ ಭೇಟಿ ನೀಡಿದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಅನೇಕರು ಪುಷ್ಪನಮನ ಸಲ್ಲಿಸಿದರು.

ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ಜವಾಹರಲಾಲ್ ನೆಹರು ಅವರ ಕೊಡುಗೆಯಿಲ್ಲದೆ 21 ನೇ ಶತಮಾನದ ಭಾರತವನ್ನು ಕಲ್ಪಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಪ್ರಜಾಪ್ರಭುತ್ವದ ನಿರ್ಭೀತ ಕಾವಲುಗಾರರಾಗಿದ್ದ ಅವರ ಪ್ರಗತಿಪರ ಆಲೋಚನೆಗಳು ಸವಾಲುಗಳ ನಡುವೆಯೂ ಭಾರತದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಬಲವಾಗಿ ಮುನ್ನಡೆಸಿದವು. ನೆಹರೂ ಅವರಿಗೆ ನನ್ನ ನಮನಗಳು ಎಂದು ಹೇಳಿದ್ದಾರೆ.


ಇನ್ನು ಪ್ರಧಾನಿ ಮೋದಿಯವರು ಟ್ವೀಟ್ ಮಾಡಿ, ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿಯಂದು ಅವರಿಗೆ ನಮನಗಳು ಎಂದು ಹೇಳಿದ್ದಾರೆ.


ಹಲವು ಪಕ್ಷದ ಮುಖಂಡರು ಸಾಮಾಜಿಕ ಜಾಲತಾಣಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

Advertisement

1889 ರಲ್ಲಿ ಜನಿಸಿದ ನೆಹರೂ ಅವರು ಭಾರತದ ಅತ್ಯಂತ ದೀರ್ಘಾವಧಿಯ ಪ್ರಧಾನ ಮಂತ್ರಿಯಾಗಿ ಉಳಿದಿದ್ದಾರೆ. ಅವರು ಆಗಸ್ಟ್ 1947 ಮತ್ತು ಮೇ 1964 ರ ನಡುವೆ ಪ್ರಧಾನಿಯಾಗಿದ್ದರು.  ಮೇ 27, 1964 ರಂದು ನಿಧನರಾದರು.

Advertisement

Udayavani is now on Telegram. Click here to join our channel and stay updated with the latest news.

Next