Advertisement

ಸರ್ದಾರ್ ವಲ್ಲಭಭಾಯಿ ಪಟೇಲ್ 144ನೇ ಜನ್ಮದಿನ: ಪ್ರಧಾನಿ, ರಾಷ್ಟ್ರಪತಿಗಳಿಂದ ಪುಷ್ಪನಮನ

09:41 AM Nov 01, 2019 | Mithun PG |

ನವದೆಹಲಿ: ಭಾರತದ ಉಕ್ಕಿನ ಮನುಷ್ಯ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ 144ನೇ ಜನ್ಮದಿನದ ಹಿನ್ನೆಲೆ ಗುಜರಾತ್‌ ನ ಕೇವಾಡಿಯಾದಲ್ಲಿರುವ ಏಕತಾ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಪುಷ್ಪನಮನ ಸಲ್ಲಿಸಿದ್ದಾರೆ.

Advertisement

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿ ಪಟೆಲ್ ಚೌಕ್ ನಲ್ಲಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌  ಪುತ್ತಳಿಗೆ ಪುಷ್ಪನಮನ ಸಲ್ಲಿಸಿದ್ದಾರೆ. ಇದೆ ವೇಳೆ ರಾಷ್ಟ್ರ ರಾಜಧಾನಿ ದೆಹಲಿಯ ನ್ಯಾಷನಲ್​ ಸ್ಟೇಡಿಯಂನಲ್ಲಿ “ಏಕತೆಯ ಓಟಕ್ಕೆ” ಚಾಲನೆ ನೀಡಿದರು.

ಸಂವಿಧಾನದಲ್ಲಿ ಆರ್ಟಿಕಲ್​ 370 ಮತ್ತು 35A ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಮಾಡುವ ಮೂಲಕ ಭಯೋತ್ಪಾದಕರಿಗೆ ಜಮ್ಮು ಮತ್ತು ಕಾಶ್ಮೀರದ ಬಾಗಿಲನ್ನು ಪ್ರಧಾನಿ ಮೋದಿ ಸಂಪೂರ್ಣವಾಗಿ ಮುಚ್ಚಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ .

ಸರ್ದಾರ್​ ವಲ್ಲಭ್‌ಭಾಯಿ ಜನ್ಮದಿನವಾದ ಇಂದು ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ. ಇಂದಿನಿಂದ ಜಮ್ಮು ಮತ್ತು ಕಾಶ್ಮೀರ ರಾಜ್ಯವಾಗಿ ಉಳಿಯದೇ ಲಡಾಕ್​ ಮತ್ತು ಜಮ್ಮು ಕಾಶ್ಮೀರ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿವೆ. ಆಗಸ್ಡ್​ 5 ರಂದು ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದು ಮಾಡಿ, ಕೇಂದ್ರಾಡಳಿ ಪ್ರದೇಶಗಳನ್ನಾಗಿ ಮಾಡುವುದಾಗಿ ಘೋಷಿಸಿತ್ತು. ಅದರಂತೆ ಇಂದಿನಿಂದ ಕೇಂದ್ರಾಡಳಿತ ಪ್ರದೇಶಗಳಾಗಿ ಅಸ್ಥಿತ್ವಕ್ಕೆ ಬಂದಿವೆ.ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದು ಮಾಡುವ ಮೂಲಕ ಪಟೇಲ್​ ಅವರು ಕನಸನ್ನು ನನಸು ಮಾಡಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next