ಸಂಭಾಲ್(ಉತ್ತರಪ್ರದೇಶ): ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ (ಫೆ.19) ಉತ್ತರಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಶ್ರೀ ಕಲ್ಕಿ ಧಾಮ್ ದೇವಾಲಯ ನಿರ್ಮಾಣಕ್ಕಾಗಿ ಶಂಕುಸ್ಥಾಪನೆ ನೆರವೇರಿಸಿದರು.
ಇದನ್ನೂ ಓದಿ:Viral: ಯುವತಿಯರ ‘ಆ ಬೇಡಿಕೆ’ಗೆ ಸ್ಪಂದಿಸಿದ ನಟ ವಿಜಯ ದೇವರಕೊಂಡ
ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಪೂಜಾ ವಿಧಿವಿಧಾನಗಳಲ್ಲಿ ಪಾಲ್ಗೊಂಡಿದ್ದರು. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಶ್ರೀ ಕಲ್ಕಿ ಧಾಮ್ ನಿರ್ಮಾಣ ಟ್ರಸ್ಟ್ ನ ಅಧ್ಯಕ್ಷ ಆಚಾರ್ಯ ಪ್ರಮೋದ್ ಕೃಷ್ಣಂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಲಕ್ಷಾಂತರ ಭಕ್ತರು ಇಲ್ಲಿ ಸೇರಿದ್ದಾರೆ. ಕಲ್ಕಿ ಧಾಮ್ ಗೆ ಪ್ರಧಾನಿ ಮೋದಿ ಅವರು ಭೇಟಿ ನೀಡುವುದನ್ನು ವೀಕ್ಷಿಸಲು ಜಗತ್ತಿನಾದ್ಯಂತ ಸಾವಿರಾರು ಮಂದಿ ಕಾಯುತ್ತಿದ್ದಾರೆ. ಇದೊಂದು ಸನಾತನ ಧರ್ಮಕ್ಕೆ ಹೆಮ್ಮೆಯ ಕ್ಷಣವಾಗಿದೆ ಎಂದು ಪ್ರಧಾನಿ ಮೋದಿ ಆಗಮನಕ್ಕೂ ಮೊದಲು ಆಚಾರ್ಯ ಪ್ರಮೋದ್ ಅವರು ಸುದ್ದಿಗಾರರ ಜೊತೆ ಮಾತನಾಡುತ್ತ ತಿಳಿಸಿದ್ದರು.
ಶ್ರೀ ಕಲ್ಕಿ ಧಾಮ್ ನಿರ್ಮಾಣ್ ಟ್ರಸ್ಟ್ ನ ಅಧ್ಯಕ್ಷ ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಶ್ರೀ ಕಲ್ಕಿ ಧಾಮ್ ನಿರ್ಮಾಣ ಮಾಡುತ್ತಿದ್ದು, ಹಲವು ಸಾಧು ಸಂತರು, ಧಾರ್ಮಿಕ ಮುಖಂಡರು ಭೇಟಿ ನೀಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಲಕ್ಷ ಕೋಟಿ ರೂ.ಗೆ ಅಧಿಕ ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ವರದಿ ತಿಳಿಸಿದೆ.