ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಮತ್ತು ಉಪರಾಷ್ಟ್ರಪತಿ ಜಗದೀಪ್ ಧನಖರ್ ಅವರು ಭಾನುವಾರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮದಿನದಂದು ಅವರ ಸ್ಮಾರಕ ‘ಸದೈವ್ ಅಟಲ್’ಗೆ ನಮನ ಸಲ್ಲಿಸಿದರು.
ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ಸದೈವ್ ಅಟಲ್ ಸ್ಮಾರಕಕ್ಕೆ ಆಗಮಿಸಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98 ನೇ ಜನ್ಮದಿನದಂದು ಪುಷ್ಪ ನಮನ ಸಲ್ಲಿಸಿದರು.
ಸ್ಮಾರಕಕ್ಕೆ ತೆರಳುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್‌ನಲ್ಲಿ, “ಅಟಲ್ ಜಿ ಅವರ ಜಯಂತಿಯಂದು ಅವರಿಗೆ ನಮನಗಳು. ಭಾರತಕ್ಕೆ ಅವರ ಕೊಡುಗೆ ಅವಿಸ್ಮರಣೀಯ. ಅವರ ನಾಯಕತ್ವ ಮತ್ತು ದೃಷ್ಟಿ ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತದೆ” ಎಂದು ಬರೆದಿದ್ದಾರೆ.
ಇದನ್ನೂ ಓದಿ:ಕೃಷ್ಣಾಪುರ ಕೇಸ್: ಎರಡು ದಿನ ಸೆಕ್ಷನ್ 144 ಜಾರಿ, ಮದ್ಯ ಮಾರಾಟ ನಿಷೇಧ, ಪೊಲೀಸ್ ಸರ್ಪಗಾವಲು
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು 1924ರ ಡಿಸೆಂಬರ್ 25ರಂದು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಜನಿಸಿದ್ದರು.