Advertisement
ಇದು ಪ್ರಧಾನಿ ನರೇಂದ್ರ ಮೋದಿ ನೀಡಿರುವ ಸಲಹೆ. ಕೊರೊನಾ ಸ್ಥಿತಿಗತಿ ಕುರಿತು ಪರಿಶೀಲಿಸಲು ಹೊಸದಿಲ್ಲಿಯಲ್ಲಿ ರವಿವಾರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿರುವ ಮೋದಿ, ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಾಸ್ಕ್ ಧರಿಸುವುದು, ಅಂತರ ಪಾಲಿಸುವುದು ಸೇರಿದಂತೆ ಮುನ್ನೆಚ್ಚರಿಕೆ ಕ್ರಮ
ಇದೇ ವೇಳೆ, ದೇಶಾದ್ಯಂತ ಸೋಮವಾರ ದಿಂದ ಆರೋಗ್ಯ, ಮುಂಚೂಣಿ ಕಾರ್ಯ ಕರ್ತರು ಹಾಗೂ ಇತರ ಆರೋಗ್ಯ ಸಮಸ್ಯೆ ಹೊಂದಿರುವ 60 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್ ನೀಡಲಾಗುತ್ತದೆ.
Related Articles
Advertisement
ಒಂದೇ ದಿನ 1.59 ಲಕ್ಷ ಪ್ರಕರಣದೇಶದಲ್ಲಿ ಶನಿವಾರದಿಂದ ರವಿವಾರದ ಅವಧಿಯಲ್ಲಿ 1,59,632 ಹೊಸ ಸೋಂಕು ಪ್ರಕರಣ ದೃಢಪಟ್ಟಿವೆ. ಇದೇ ಅವಧಿಯಲ್ಲಿ 327 ಮಂದಿ ಅಸುನೀಗಿದ್ದಾರೆ. 224 ದಿನಗಳಲ್ಲೇ ಪತ್ತೆಯಾದ ಗರಿಷ್ಠ ಪ್ರಕರಣ ಇದಾಗಿದೆ. ಇನ್ನು ಒಂದೇ ದಿನ ದೇಶಾದ್ಯಂತ 552 ಹೊಸ ಒಮಿಕ್ರಾನ್ ಪ್ರಕರಣಗಳು ದೃಢಪಟ್ಟು, ಒಟ್ಟಾರೆ ಸೋಂಕಿತರ ಸಂಖ್ಯೆ 3,623ಕ್ಕೇರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ರಾಜ್ಯದ ಪಾಸಿಟಿವಿಟಿ ದರ ಶೇ.6.33ಕ್ಕೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ 3ನೇ ಅಲೆ ತೀವ್ರಗೊಂಡಿದ್ದು, ಪ್ರಕರಣ ಗಳ ಸಂಖ್ಯೆ 10 ದಿನಗಳಲ್ಲಿ 41,000ರ ಗಡಿ ದಾಟಿದೆ. ರವಿವಾರ 12,000 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 4 ಮಂದಿ ಮೃತಪಟ್ಟಿದ್ದಾರೆ. ಆ ಮೂಲಕ ರಾಜ್ಯದ ಪಾಸಿಟಿವಿಟಿ ದರ ಶೇ. 6.33ಕ್ಕೆ ಏರಿಕೆಯಾಗಿದೆ.