ಮುಂಬೈ: ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಬಗ್ಗೆ ಪ್ರಧಾನಿ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ನಾಗ್ಪುರ ಭೇಟಿಗೆ ಒಂದು ದಿನ ಮುಂಚಿತವಾಗಿ, ಉದ್ಧವ್ ಠಾಕ್ರೆ ಶನಿವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಈ ಮಾತುಗಳನ್ನಾಡಿದರು. “ಮಹಾರಾಷ್ಟ್ರದ ಕೆಲವು ಹಳ್ಳಿಗಳ ಮೇಲೆ ಹಕ್ಕು ಚಲಾಯಿಸುತ್ತಿರುವ ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಅವರ ಬಗ್ಗೆ ಮೋದಿ ಮಾತನಾಡಬೇಕು.” ಎಂದಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿ ಅವರು ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೆ ಬರುತ್ತಿದ್ದಾರೆ. ನಾವು ಅವರನ್ನು ಸ್ವಾಗತಿಸುತ್ತೇವೆ. ಅವರ ಭೇಟಿಯ ಸಮಯದಲ್ಲಿ ಅವರು ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು” ಎಂದು ಠಾಕ್ರೆ ಹೇಳಿದರು.
ಇದನ್ನೂ ಓದಿ:ಸೋತ ಪೋರ್ಚುಗಲ್..; ಕಣ್ಣೀರಿಡುತ್ತಲೇ ಮೈದಾನ ತೊರೆದ ಕ್ರಿಸ್ಟಿಯಾನೊ ರೊನಾಲ್ಡೊ
ಮಹಾರಾಷ್ಟ್ರದ ಕೆಲವು ಗ್ರಾಮಗಳು ಕರ್ನಾಟಕಕ್ಕೆ ಸೇರಬೇಕು ಎನ್ನುತ್ತಿರುವ ಕರ್ನಾಟಕದ ಮುಖ್ಯಮಂತ್ರಿ ಬಗ್ಗೆ ಅವರು ಮಾತನಾಡಬೇಕು ಎಂದು ಠಾಕ್ರೆ ಆಗ್ರಹಿಸಿದರು.