Advertisement
ಕೋವಿಡ್ ನ ಎರಡನೇ ಅಲೆಯ ಕಾರಣದಿಂದಾಗಿ ದೇಶದಲ್ಲಿ ಬಿಕ್ಕಟ್ಟನ್ನು ಪರಿಸಲು ಪ್ರಧಾನಿ ನರೇಂದ್ರ ಮೋದಿ ಸಂಪೂರ್ಣ ವಿಫಲರಾಗಿದ್ದಾರೆ. ದೇಶದಲ್ಲಿಯೇ ಕೋವಿಡ್ ನಿಯಂತ್ರಣ ಮಾಡುವುದಕ್ಕಾಗದ ಮೋದಿ, ಲಸಿಕೆಗಳನ್ನು ಇತರ ದೇಶಗಳಿಗೆ ಪೂರೈಸಿದ್ದಾರೆ. ದೇಶದಲ್ಲಿ ಲಸಿಕೆಗಳ ಕೊರತೆ ಇರುವುದು ಮೋದಿಯವರಿಗೆ ಕಾಣಿಸಲಿಲ್ಲ ಎಂದು ಮಮತಾ ಆರೋಪಿಸಿದ್ದಾರೆ.
Related Articles
Advertisement
ಇನ್ನು, ಪಶ್ಚಿಮ ಬಂಗಾಳದ ಕೋವಿಡ್ ಪರಿಸ್ಥಿತಿಯನ್ನು ಉಲ್ಲೇಖಿಸಿದ ಮಮತಾ, ರಾಜ್ಯದ ಪ್ರತಿಯೊಬ್ಬ ನಾಗರಿಕರಿಗೂ ಉಚಿತವಾಗಿ ಲಸಿಕೆ ನೀಡಲು ಉದ್ದೇಶದಿಂದ ಪಶ್ಚಿಮ ಬಂಗಾಳ ಸರ್ಕಾರ 5.4 ಕೋಟಿ ಡೋಸ್ ಲಸಿಕೆ ಕೇಳಿತ್ತು, ಆ ಕುರಿತಾಗಿ ಇದುವರೆಗೆ ಯಾವುದೇ ಪ್ರತಿಕ್ರಿಯೆಯನ್ನು ನಾವು ಪಡೆದಿಲ್ಲ ಎಂದಿದ್ದಾರೆ.
ಓದಿ : ಶಾಂತನಗೌಡರ ಶಾಸಕರಾಗಿದ್ದಾಗ ಮಾಡಿದ ಸಾಧನೆ ಮುಂದಿಡಲಿ
ಈ ವಿಷಯದ ಬಗ್ಗೆ ನಾನು ಇಂದು ಪ್ರಧಾನ ಮಂತ್ರಿಗೆ ಪತ್ರವನ್ನು ಕಳುಹಿಸುತ್ತೇನೆ. ಇಡೀ ದೇಶದಲ್ಲಿ ಆಮ್ಲಜನಕ ಮತ್ತು ರೆಮ್ಡೆಸಿವಿರ್ ಕೊರತೆಯಿದೆ. ಇದಕ್ಕೆ ಯಾರು ಕಾರಣ? ದೇಶದ ಪ್ರತಿಯೊಬ್ಬ ನಿವಾಸಿಗಳಿಗೆ ಲಸಿಕೆ ಹಾಕುವಂತೆ ಕೋರಿ ಪತ್ರ ಕಳುಹಿಸುತ್ತೇನೆ ಎಂದು ಮಮತಾ ಹೇಳಿರುವುದನ್ನು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
80 ದೇಶಗಳಿಗೆ ಕೋವಿಡ್ ಲಸಿಕೆಯನ್ನು ರವಾನೆ ಮಾಡಿರುವುದನ್ನು ಉಲ್ಲೇಖಿಸಿದ ಮಮತಾ, ಇತರ ದೇಶಗಳಿಗೆ ಲಸಿಕೆಯನ್ನು ಪೂರೈಸಿರುವುದರ ಬಗ್ಗೆ ನಮಗೆ ಏನು ಆಕ್ಷೇಪವಿಲ್ಲ. ಆದರೇ, ದೇಶದಲ್ಲಿ ಲಸಿಕೆಗಳ ಕೊರತೆ ಇದೆ. ಸೋಂಕು ಹೆಚ್ಚಳವಿರುವ ಮಹಾರಾಷ್ಟ್ರ, ಉತ್ತರ ಪ್ರದೇಶ, ಬಂಗಾಳ ಸೇರಿ ದೇಶದ ಎಲ್ಲಾ ರಾಜ್ಯಗಳಿಗೆ ಮೊದಲು ಲಸಿಕೆಗಳನ್ನು ಪೂರೈಸಿ. ಮೋದಿ ಇದನ್ನು ಮಾಡುವುದರಲ್ಲಿ ವಿಫಲರಾಗಿದ್ದಾರೆ. ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು ಎನ್ನುವುದು ಮಾತ್ರ ಅವರ ಉದ್ದೇಶವಾಗಿತ್ತು ಎಂದು ಅವರು ಹೇಳಿದ್ದಾರೆ.
ಓದಿ : ದೇಶದಲ್ಲಿ ಕೋವಿಡ್ ಉಲ್ಬಣ : ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್