Advertisement

Palestine ಅಧ್ಯಕ್ಷರಿಗೆ ಪ್ರಧಾನಿ ಮೋದಿ ಕರೆ: “ತಾತ್ವಿಕ ಸ್ಥಾನ” ಪುನರುಚ್ಛಾರ

07:29 PM Oct 19, 2023 | Team Udayavani |

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರಿಗೆ ಕರೆ ಮಾಡಿ ಸಂತಾಪ ಸೂಚಿಸಿದ್ದು, ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ ವಿಷಯದಲ್ಲಿ ಭಾರತದ ದೀರ್ಘಕಾಲದ “ತಾತ್ವಿಕ ಸ್ಥಾನ” ವನ್ನು ಪುನರುಚ್ಚರಿಸಿದರು.

Advertisement

ಭಯೋತ್ಪಾದನೆ, ಹಿಂಸಾಚಾರ ಮತ್ತು ಪ್ರದೇಶದಲ್ಲಿ ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿಯ ಬಗ್ಗೆ ಅಬ್ಬಾಸ್ ಅವರೊಂದಿಗೆ ಭಾರತದ “ಆಳವಾದ ಕಾಳಜಿ” ಯನ್ನು ಹಂಚಿಕೊಂಡರು.

ಪ್ಯಾಲೆಸ್ತೀನ್ ಜನರಿಗೆ ಮಾನವೀಯ ನೆರವು ಕಳುಹಿಸುವುದನ್ನು ಭಾರತ ಮುಂದುವರಿಸಲಿದೆ ಎಂದು ಪ್ರಧಾನಿ ಮೋದಿ ಅಧ್ಯಕ್ಷರಿಗೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next