Advertisement

PM Modi ವಿಶೇಷ ಲೇಖನ: ಏಕ್‌ ಭಾರತ್‌, ಶ್ರೇಷ್ಠ ಭಾರತ್‌ಗೆ ಬಲ

11:36 PM Dec 11, 2023 | Team Udayavani |

ಆಗಸ್ಟ್‌ 5: ಪ್ರತಿಯೊಬ್ಬ ಭಾರತೀಯನ ಮನದಲ್ಲಿ ಅಚ್ಚೊತ್ತಿದ ದಿನ. ಅಂದು ನಮ್ಮ ಸಂಸತ್ತು 370 ನೇ ವಿಧಿ ರದ್ದುಗೊಳಿಸಿತು. ಈಗ ಸುಪ್ರೀಂ ಕೋರ್ಟ್‌ ನಮ್ಮ ನಿರ್ಣಯವನ್ನು ಗೌರವಿಸಿದೆ. ಜತೆಗೆ ಆ ಭಾಗದ ಅಭಿವೃದ್ಧಿಯನ್ನು ನೋಡಿ ಜನತಾ ನ್ಯಾಯಾಲಯವು ನಾಲ್ಕು ವರ್ಷಗಳಿಂದ ಬೆಂಬಲ ಸೂಚಿಸುತ್ತಲೇ ಬರುತ್ತಿದೆ.

Advertisement

ಡಿಸೆಂಬರ್‌ 11ರಂದು ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯವು 370 ಮತ್ತು 35 (ಎ) ವಿಧಿಗಳ ರದ್ದತಿಯ ಬಗ್ಗೆ ಐತಿಹಾಸಿಕ ತೀರ್ಪು ನೀಡಿತು. ತನ್ನ ತೀರ್ಪಿನ ಮೂಲಕ, ನ್ಯಾಯಾಲಯವು ಪ್ರತಿಯೊಬ್ಬ ಭಾರತೀಯನು ಗೌರವಿಸುವ ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ಎತ್ತಿಹಿಡಿದಿದೆ. 2019ರ ಆಗಸ್ಟ್‌ 5ರಂದು ತೆಗೆದುಕೊಂಡ ನಿರ್ಧಾರವನ್ನು ಸಾಂವಿ ಧಾನಿಕ ಏಕ‌ತೆಯನ್ನು ಹೆಚ್ಚಿಸುವ ಉದ್ದೇಶದಿಂದ ಮಾಡಲಾಗಿ ದೆಯೇ ಹೊರತು ವಿಘಟನೆಯಲ್ಲ ಎಂದು ಸರ್ವೋಚ್ಚ ನ್ಯಾಯಾ ಲಯ ಸರಿಯಾಗಿ ಗಮನಿಸಿದೆ. 370ನೇ ವಿಧಿ ಶಾಶ್ವತವಲ್ಲ ಎಂಬ ಅಂಶವನ್ನೂ ನ್ಯಾಯಾಲಯವೂ ಗುರುತಿಸಿದೆ.

ಜಮ್ಮು, ಕಾಶ್ಮೀರ ಮತ್ತು ಲಡಾಖ್‌ನ ಅದ್ಭುತವಾದ ಭೂ ದೃಶ್ಯಗಳು, ಪ್ರಶಾಂತ ಕಣಿವೆಗಳು ಮತ್ತು ಭವ್ಯವಾದ ಪರ್ವತಗಳು ತಲೆಮಾರುಗಳಿಂದ ಕವಿಗಳು, ಕಲಾವಿದರು ಮತ್ತು ಸಾಹಸಿಗಳ ಮನಸೂರೆಗೊಂಡಿವೆ. ಇಲ್ಲಿ ಹಿಮಾಲಯವು ಆಕಾಶದೆತ್ತರಕ್ಕೆ ನಿಂತಿದೆ ಮತ್ತು ಸರೋವರಗಳು ಮತ್ತು ನದಿಗಳ ಶುದ್ಧ ನೀರು ಸ್ವರ್ಗವನ್ನು ಪ್ರತಿಬಿಂಬಿಸುತ್ತವೆ. ಆದರೆ ಕಳೆದ ಏಳು ದಶಕಗಳಿಂದ, ಈ ಸ್ಥಳಗಳು ಹಿಂಸಾಚಾರ ಮತ್ತು ಅಸ್ಥಿರತೆಗೆ ಸಾಕ್ಷಿಯಾಗಿದ್ದವು ಎನ್ನುವುದೇ ದುರಂತ.

ದುರದೃಷ್ಟವಶಾತ್‌ ಶತಮಾನಗಳ ವಸಾಹತುಶಾಹಿಯಿಂದಾಗಿ, ಮುಖ್ಯವಾಗಿ ಆರ್ಥಿಕ ಮತ್ತು ಮಾನಸಿಕ ಅಧೀನತೆಯಿಂದಾಗಿ, ನಮ್ಮದು ಒಂದು ರೀತಿಯ ಗೊಂದಲಮಯ ಸಮಾಜವಾಗಿದೆ. ಮೂಲಭೂತ ವಿಷಯಗಳ ಬಗ್ಗೆ ಸ್ಪಷ್ಟತೆಯ ಬದಲು, ನಾವು ದ್ವಂದ್ವಕ್ಕೀಡಾಗುತ್ತೇವೆ. ವಿಷಾದದ ವಿಷಯವೆಂದರೆ, ಜಮ್ಮು-ಕಾಶ್ಮೀರ ಇಂತಹ ಮನಃಸ್ಥಿತಿಯ ದೊಡ್ಡ ಬಲಿಪಶುವಾಯಿತು. ಸ್ವಾತಂತ್ರ್ಯದ ಸಮಯದಲ್ಲಿ, ನಾವು ರಾಷ್ಟ್ರೀಯ ಐಕ್ಯತೆಯ ಹೊಸ ಆರಂಭದ ಆಯ್ಕೆಯನ್ನು ಹೊಂದಿದ್ದೆವು. ಆದರೆ ದೀರ್ಘಾ ವಧಿಯ ರಾಷ್ಟ್ರೀಯ ಹಿತಾಸಕ್ತಿಗಳನ್ನು ನಿರ್ಲಕ್ಷಿಸಿ ಗೊಂದಲಮಯ ಸಮಾಜದ ವಿಧಾನವನ್ನು ಮುಂದುವರಿಸಲು ನಾವು ನಿರ್ಧರಿಸಿದೆವು.

ನನ್ನ ಜೀವನದ ಆರಂಭದಿಂದಲೂ ಜಮ್ಮು-ಕಾಶ್ಮೀರ ಆಂದೋಲನದೊಂದಿಗೆ ಸಂಪರ್ಕ ಹೊಂದುವ ಅವಕಾಶವನ್ನು ನಾನು ಪಡೆದಿದ್ದೇನೆ. ನಾನು ಜಮ್ಮು-ಕಾಶ್ಮೀರವು ಕೇವಲ ರಾಜಕೀಯ ವಿಷಯವಲ್ಲ ಎಂಬ ಸೈದ್ಧಾಂತಿಕ ಚೌಕಟ್ಟಿಗೆ ಸೇರಿದ ವನು. ಶ್ಯಾಮ ಪ್ರಸಾದ್‌ ಮುಖರ್ಜಿ ಅವರು ನೆಹರೂ ಸಂಪುಟದಲ್ಲಿ ಪ್ರಮುಖ ಖಾತೆಯನ್ನು ಹೊಂದಿದ್ದರು ಮತ್ತು ಅವರು ದೀರ್ಘ‌ ಕಾಲ ಸರಕಾರದಲ್ಲಿ ಉಳಿಯಬಹುದಿತ್ತು. ಆದರೂ ಅವರು ಕಾಶ್ಮೀರ ಸಮಸ್ಯೆಯ ಕಾರಣದಿಂದಾಗಿ ಸಂಪುಟ ತೊರೆದರು ಮತ್ತು ಮುಂದೆ ತಮ್ಮ ಜೀವನವನ್ನು ಪಣಕ್ಕಿಟ್ಟು ಕಠಿನ ಹಾದಿ ಹಿಡಿದರು. ಅವರ ಪ್ರಯತ್ನಗಳು ಮತ್ತು ತ್ಯಾಗದಿಂದಾಗಿ ಕೋಟ್ಯಂತರ ಭಾರತೀಯರು ಕಾಶ್ಮೀರ ಸಮಸ್ಯೆಯೊಂದಿಗೆ ಭಾವನಾತ್ಮಕವಾಗಿ ಸಂಬಂಧ ಹೊಂದಿದ್ದಾರೆ. ವರ್ಷಗಳ ಅನಂತರ ಶ್ರೀನಗರದ ಸಾರ್ವಜನಿಕ ಸಭೆಯೊಂದರಲ್ಲಿ ಅಟಲ್‌ ಜಿ ಅವರು “ಇನ್ಸಾನಿ ಯಾತ್‌’, “ಜಮ್ಹೂರಿಯಾತ್‌’ ಮತ್ತು “ಕಾಶ್ಮೀರಿಯಾತ್‌’ ಎಂಬ ಪ್ರಬಲ ಸಂದೇಶವನ್ನು ನೀಡಿದರು, ಇದು ಯಾವಾಗಲೂ ಸ್ಫೂರ್ತಿಯ ಮೂಲವಾಗಿದೆ.

Advertisement

ಜಮ್ಮು-ಕಾಶ್ಮೀರದಲ್ಲಿ ನಡೆದಿರುವುದು ನಮ್ಮ ದೇಶಕ್ಕೆ ಮತ್ತು ಅಲ್ಲಿ ವಾಸಿಸುವ ಜನರಿಗೆ ಮಾಡಿದ ದೊಡ್ಡ ದ್ರೋಹ ಎಂಬುದು ನನ್ನ ದೃಢವಾದ ನಂಬಿಕೆಯಾಗಿತ್ತು. ಈ ಕಳಂಕವನ್ನು, ಜನರಿಗೆ ಮಾಡಿದ ಅನ್ಯಾಯವನ್ನು ತೊಡೆದು ಹಾಕಲು ನಾನು ಏನನ್ನಾದರೂ ಮಾಡಬೇಕೆಂಬುದು ನನ್ನ ಬಲವಾದ ಬಯಕೆಯಾಗಿತ್ತು. ಜಮ್ಮು-ಕಾಶ್ಮೀರದ ಜನರ ನೋವನ್ನು ನಿವಾರಿಸಲು ನಾನು ಸದಾ ಕಾಲ ಕೆಲಸ ಮಾಡಲು ಬಯಸುತ್ತೇನೆ.
ಮೂಲಭೂತವಾಗಿ ಹೇಳುವುದಾದರೆ- 370 ಮತ್ತು 35 (ಎ) ವಿಧಿಗಳು ಪ್ರಮುಖ ಅಡೆತಡೆಗಳಾಗಿದ್ದವು. ಅದು ಒಡೆಯಲಾಗದ ಗೋಡೆಯಂತೆ ಕಾಣುತ್ತಿತ್ತು ಮತ್ತು ಇದರಿಂದ ಬಡವರು ಮತ್ತು ದೀನದಲಿತರು ಬಳಲುತ್ತಿದ್ದರು. ಈ ವಿಧಿಗಳಿಂದಾಗಿ ಒಂದೇ ರಾಷ್ಟ್ರಕ್ಕೆ ಸೇರಿದ ಜನರ ನಡುವೆ ಅಂತರವನ್ನು ಸೃಷ್ಟಿಸಲಾಯಿತು. ಈ ಅಂತರದಿಂದಾಗಿ, ಜಮ್ಮು-ಕಾಶ್ಮೀರದ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡಲು ಬಯಸಿದ ನಮ್ಮ ರಾಷ್ಟ್ರದ ಅನೇಕರು ಅಲ್ಲಿನ ಜನರ ನೋವನ್ನು ಸ್ಪಷ್ಟವಾಗಿ ಅನುಭವಿಸಿದರೂ ಅದನ್ನು ಮಾಡಲು ಸಾಧ್ಯವಾಗಲಿಲ್ಲ. ಕಳೆದ ಹಲವು ದಶಕಗಳಲ್ಲಿ ಸಮಸ್ಯೆಯನ್ನು ಹತ್ತಿರದಿಂದ ನೋಡಿದ ಒಬ್ಬ ಕಾರ್ಯಕರ್ತನಾಗಿ, ನಾನು ಸಮಸ್ಯೆಯ ನಿರ್ದಿಷ್ಟತೆಗಳು ಮತ್ತು ಸಂಕೀರ್ಣತೆಗಳ ಸೂಕ್ಷ್ಮವಾದ ತಿಳುವಳಿಕೆಯನ್ನು ಹೊಂದಿದ್ದೆ. ಆದರೂ ನನಗೆ ಒಂದು ವಿಷಯ ಸ್ಪಷ್ಟವಾಗಿತ್ತು. ಅದೆಂದರೆ ಜಮ್ಮು-ಕಾಶ್ಮೀರದ ಜನರು ಅಭಿವೃದ್ಧಿಯನ್ನು ಬಯಸುತ್ತಾರೆ. ಅವರು ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಜೀವನವನ್ನು, ಹಿಂಸೆ ಮತ್ತು ಅನಿಶ್ಚಿತತೆಯಿಂದ ಮುಕ್ತ ಜೀವನವನ್ನು ಬಯಸುತ್ತಾರೆ ಎಂಬುದು.

ಹೀಗಾಗಿ ಜಮ್ಮು-ಕಾಶ್ಮೀರದ ಜನರಿಗೆ ಸೇವೆ ಸಲ್ಲಿಸುವಾಗ, ನಾವು ಮೂರು ಆಧಾರ ಸ್ತಂಭಗಳಿಗೆ ಆದ್ಯತೆ ನೀಡಿದ್ದೇವೆ- ನಾಗರಿಕರ ಕಾಳಜಿಯನ್ನು ಅರ್ಥಮಾಡಿಕೊಳ್ಳುವುದು, ಬೆಂಬಲ ಕ್ರಮಗಳ ಮೂಲಕ ವಿಶ್ವಾಸವನ್ನು ಬೆಳೆಸುವುದು ಮತ್ತು ಹೆಚ್ಚಿನ ಅಭಿವೃದ್ಧಿಗೆ ಆದ್ಯತೆ ನೀಡುವುದು.
2014ರಲ್ಲಿ, ನಾವು ಅಧಿಕಾರ ವಹಿಸಿಕೊಂಡ ಅನಂತರ, ಜಮ್ಮು-ಕಾಶ್ಮೀರದಲ್ಲಿ ವಿನಾಶಕಾರಿ ಪ್ರವಾಹಗಳು ಸಂಭವಿಸಿದವು, ಕಾಶ್ಮೀರ ಕಣಿವೆಯಲ್ಲಿ ಸಾಕಷ್ಟು ಹಾನಿಯಾಯಿತು. ಸೆಪ್ಟಂಬರ್‌ 2014ರಲ್ಲಿ, ನಾನು ಪರಿಸ್ಥಿತಿಯನ್ನು ತಿಳಿಯಲು ಶ್ರೀನಗರಕ್ಕೆ ಹೋಗಿದ್ದೆ ಮತ್ತು ಪುನರ್ವಸತಿಗಾಗಿ ವಿಶೇಷ ಸಹಾಯವಾಗಿ 1000 ಕೋಟಿ ರೂಪಾಯಿಗಳನ್ನು ಘೋಷಿಸಿದೆ, ಬಿಕ್ಕಟ್ಟಿನ ಸಂದರ್ಭದಲ್ಲಿ ಜನರನ್ನು ಬೆಂಬಲಿಸಲು ನಮ್ಮ ಸರಕಾರದ ಬದ್ಧತೆಯನ್ನು ತಿಳಿಸಿದೆ. ಅದೇ ವರ್ಷ ಜಮ್ಮು-ಕಾಶ್ಮೀರದಲ್ಲಿ ನಾವು ಕಳೆದುಕೊಂಡವರ ಸ್ಮರಣಾರ್ಥವಾಗಿ ನಾನು ದೀಪಾವಳಿ ಆಚರಿಸದಿರಲು ನಿರ್ಧರಿಸಿದೆ. ನಾನು ದೀಪಾವಳಿಯ ದಿನ ಕಾಶ್ಮೀರದಲ್ಲಿರಲು ಸಹ ನಿರ್ಧರಿಸಿದೆ.

ಜಮ್ಮು-ಕಾಶ್ಮೀರದ ಅಭಿವೃದ್ಧಿ ಪಯಣವನ್ನು ಮತ್ತಷ್ಟು ಬಲಪಡಿಸುವ ಸಲುವಾಗಿ ನಮ್ಮ ಸರಕಾರದ ಸಚಿವರು ಆಗಾಗ ಅಲ್ಲಿಗೆ ಹೋಗಿ ಜನರೊಂದಿಗೆ ನೇರವಾಗಿ ಸಂವಾದ ನಡೆಸಬೇ ಕೆಂದು ನಾವು ನಿರ್ಧರಿಸಿದೆವು. ಈ ಭೇಟಿಗಳು ಜಮ್ಮು-ಕಾಶ್ಮೀರದಲ್ಲಿ ಸೌಹಾರ್ದತೆಯನ್ನು ಬೆಳೆಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿ ಸಿವೆ. ಮೇ 2014ರಿಂದ ಮಾರ್ಚ್‌ 2019ರ ವರೆಗೆ ಸಚಿವರ 150 ಕ್ಕೂ ಹೆಚ್ಚು ಭೇಟಿಗಳು ನಡೆದಿವೆ. ಇದೊಂದು ದಾಖಲೆ ಯಾಗಿದೆ. 2015ರ ವಿಶೇಷ ಪ್ಯಾಕೇಜ್‌ ಜಮ್ಮು-ಕಾಶ್ಮೀರದ ಅಭಿವೃದ್ಧಿ ಅಗತ್ಯಗಳನ್ನು ಪರಿಹರಿಸುವಲ್ಲಿ ಮಹತ್ವದ ಹೆಜ್ಜೆ ಯಾಗಿದೆ. ಇದು ಮೂಲಸೌಕರ್ಯ ಅಭಿವೃದ್ಧಿ, ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಉತ್ತೇಜನ ಮತ್ತು ಕರಕುಶಲ ಉದ್ಯಮಕ್ಕೆ ಬೆಂಬಲವಾಗಿದೆ.

ನಾವು ಜಮ್ಮು-ಕಾಶ್ಮೀರದಲ್ಲಿ ಕ್ರೀಡೆಯ ಶಕ್ತಿಯನ್ನು ಬಳಸಿಕೊಂಡಿದ್ದೇವೆ, ಯುವಜನರ ಕನಸುಗಳಿಗೆ ಕಿಚ್ಚು ಹೊತ್ತಿಸುವ ಸಾಮರ್ಥ್ಯವನ್ನು ಗುರುತಿಸಿದ್ದೇವೆ. ಕ್ರೀಡಾ ಉಪಕ್ರಮಗಳ ಮೂಲಕ, ಅವರ ಆಕಾಂಕ್ಷೆಗಳು ಮತ್ತು ಭವಿಷ್ಯದಲ್ಲಿ ಆ್ಯತ್ಲೆಟಿಕ್‌ ಹಾದಿ ಹಿಡಿಯುವ ಅವರ ರೂಪಾಂತರದ ಪರಿಣಾಮವನ್ನು ನಾವು ನೋಡಿದ್ದೇವೆ. ಕ್ರೀಡಾ ಸ್ಥಳಗಳನ್ನು ಮೇಲ್ದರ್ಜೆಗೇರಿಸಲಾಗಿದೆ, ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಮತ್ತು ತರಬೇತುದಾರರು ಲಭ್ಯವಾಗುವಂತೆ ಮಾಡಲಾಗಿದೆ. ಅತ್ಯಂತ ವಿಶಿಷ್ಟವಾದ ವಿಷಯವೆಂದರೆ ಸ್ಥಳೀಯ ಫುಟ್‌ಬಾಲ್‌ ಕ್ಲಬ್‌ಗಳ ಸ್ಥಾಪನೆಯನ್ನು ಪ್ರೋತ್ಸಾಹಿಸುವುದು. ಫಲಿತಾಂಶಗಳು ಅತ್ಯುತ್ತಮ ವಾಗಿದ್ದವು. ಪ್ರತಿಭಾನ್ವಿತ ಫುಟ್‌ಬಾಲ್‌ ಆಟಗಾರ ಅಫಾÏನ್‌ ಆಶಿಕ್‌ ಅವರ ಹೆಸರು ನನ್ನ ನೆನಪಿಗೆ ಬರುತ್ತದೆ- ಡಿಸೆಂಬರ್‌ 2014ರಲ್ಲಿ ಅವರು ಶ್ರೀನಗರದಲ್ಲಿ ಕಲ್ಲು ತೂರಾಟ ನಡೆಸುತ್ತಿದ್ದ ಗುಂಪಿನ ಭಾಗವಾಗಿದ್ದರು, ಆದರೆ ಸೂಕ್ತ ಪ್ರೋತ್ಸಾಹ ದೊರೆತ ಕಾರಣದಿಂದ ಆಕೆ ಫುಟ್‌ಬಾಲ್‌ ಕಡೆಗೆ ತಿರುಗಿದರು, ಅವರನ್ನು ತರಬೇತಿಗೆ ಕಳುಹಿಸಲಾಯಿತು ಮತ್ತು ಆಟದಲ್ಲಿ ಮಿಂಚಿದರು. ಫಿಟ್‌ ಇಂಡಿಯಾ ಡೈಲಾಗ್‌ ಒಂದರಲ್ಲಿ ನಾನು ಅವರೊಂದಿಗೆ ಸಂವಾದ ನಡೆಸಿದ್ದು ನೆನಪಿದೆ, ಅಲ್ಲಿ ನಾನು “ಬೆಂಡ್‌ ಇಟ್‌ ಲೈಕ್‌ ಬೆಕ್‌ಹ್ಯಾಮ್‌’ಬಿಟ್ಟು “ಏಸ್‌ ಇಟ್‌ ಲೈಕ್‌ ಅಫ್ಶಾನ್‌’ಆಗುವ ಸಮಯ ಬಂದಿದೆ ಎಂದು ಹೇಳಿದೆ. ಇತರ ಯುವಕರು ಕಿಕ್‌ ಬಾಕ್ಸಿಂಗ್‌, ಕರಾಟೆ ಮತ್ತು ಇತರ ಕ್ರೀಡೆಗಳಲ್ಲಿ ಮಿಂಚಲು ಪ್ರಾರಂಭಿಸಿದರು.

ಆಗಸ್ಟ್‌ 5ರ ಐತಿಹಾಸಿಕ ದಿನವು ಪ್ರತಿಯೊಬ್ಬ ಭಾರತೀಯನ ಹೃದಯ ಮತ್ತು ಮನಸ್ಸಿನಲ್ಲಿ ಅಚ್ಚೊತ್ತಿದೆ. ನಮ್ಮ ಸಂಸತ್ತು 370 ನೇ ವಿಧಿಯನ್ನು ರದ್ದುಗೊಳಿಸುವ ಐತಿಹಾಸಿಕ ನಿರ್ಧಾರವನ್ನು ಅಂಗೀಕರಿಸಿತು. ಅಂದಿನಿಂದ ಜಮ್ಮು, ಕಾಶ್ಮೀರ ಮತ್ತು ಲಡಾಖ್‌ ನಲ್ಲಿ ಬಹಳಷ್ಟು ಬದಲಾವಣೆಯಾಗಿದೆ. ನ್ಯಾಯಾಲಯದ ತೀರ್ಪು ಡಿಸೆಂಬರ್‌ 2023 ರಲ್ಲಿ ಬಂದಿದೆ, ಆದರೆ ಜಮ್ಮು, ಕಾಶ್ಮೀರ ಮತ್ತು ಲಡಾಖ್‌ನಾದ್ಯಂತ ಅಭಿವೃದ್ಧಿಯ ಅಲೆಯನ್ನು ಜನತಾ ನ್ಯಾಯಾಲಯವು ನಾಲ್ಕು ವರ್ಷಗಳಿಂದ ನೋಡಿದೆ. 370 ಮತ್ತು 35 (ಎ) ವಿಧಿಗಳನ್ನು ರದ್ದುಗೊಳಿಸುವ ಸಂಸತ್‌ನ ನಿರ್ಧಾರಕ್ಕೆ ಬೆಂಬಲ ಸೂಚಿಸಿದೆ. ರಾಜಕೀಯವಾಗಿ ಕಳೆದ 4 ವರ್ಷಗಳು ತಳ ಮಟ್ಟದ ಪ್ರಜಾಪ್ರಭುತ್ವದಲ್ಲಿ ಹೊಸ ನಂಬಿಕೆಯೊಂದಿಗೆ ಗುರುತಿ ಸಲ್ಪಟ್ಟಿವೆ. ಮಹಿಳೆಯರು, ಆದಿವಾಸಿಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಮಾಜದ ಕಟ್ಟಕಡೆಯ ವರ್ಗದವರಿಗೆ ಅವರ ಸವಲತ್ತುಗಳು ಸಿಗುತ್ತಿರಲಿಲ್ಲ. ಅದೇ ಸಮಯದಲ್ಲಿ, ಲಡಾಖ್‌ನ ಆಕಾಂಕ್ಷೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿತ್ತು. ಆಗಸ್ಟ್‌ 5, 2019 ಎಲ್ಲವನ್ನೂ ಬದಲಾಯಿಸಿತು. ಎಲ್ಲ ಕೇಂದ್ರೀಯ ಕಾನೂ ನುಗಳು ಈಗ ಭಯ ಅಥವಾ ಪಕ್ಷಪಾತವಿಲ್ಲದೇ ಪ್ರಾತಿನಿಧ್ಯವು ಹೆಚ್ಚು ವ್ಯಾಪಕವಾಗಿದೆ- ಮೂರು ಹಂತದ ಪಂಚಾಯತ್‌ ರಾಜ್‌ ವ್ಯವಸ್ಥೆ ಜಾರಿಯಲ್ಲಿದೆ. ಕೇಂದ್ರ ಸರಕಾರದ ಪ್ರಮುಖ ಯೋಜ ನೆಗಳು ಪರಿಪೂರ್ಣತೆಯ ಮಟ್ಟವನ್ನು ತಲುಪಿವೆ, ಹೀಗಾಗಿ ಸಮಾಜದ ಎಲ್ಲ ವರ್ಗಗಳನ್ನು ಒಳಗೊಂಡಿವೆ.

ಡಿಸೆಂಬರ್‌ 11ರಂದು ತನ್ನ ತೀರ್ಪಿನಲ್ಲಿ, ಸರ್ವೋತ್ಛ ನ್ಯಾಯಾಲಯವು “ಏಕ್‌ ಭಾರತ್‌, ಶ್ರೇಷ್ಠ ಭಾರತ್‌’ಎಂಬ ಮನೋಭಾವವನ್ನು ಬಲಪಡಿಸಿದೆ – ಅದು ನಮಗೆ ಏಕತೆಯ ಬಂಧಗಳು ಮತ್ತು ಉತ್ತಮ ಆಡಳಿತದ ಹಂಚಿಕೆಯ ಬದ್ಧತೆಯನ್ನು ನೆನಪಿಸಿದೆ. ಇಂದು ಜಮ್ಮು, ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಜನಿಸಿದ ಪ್ರತಿಯೊಂದು ಮಗುವೂ ಸ್ವತ್ಛವಾದ ಕ್ಯಾನ್ವಾಸ್‌ನೊಂದಿಗೆ ಜನಿಸು ತ್ತದೆ, ಅಲ್ಲಿ ಅವನು ಅಥವಾ ಅವಳು ರೋಮಾಂಚಕ ಆಕಾಂಕ್ಷೆ ಗಳಿಂದ ಕೂಡಿದ ಭವಿಷ್ಯವನ್ನು ಚಿತ್ರಿಸಬಹುದು. ಇಂದು ಜನರ ಕನಸುಗಳು ಬಂಧಿಗಳಾಗದೆ ಭವಿಷ್ಯದ ಸಾಧ್ಯತೆಗಳಾಗಿವೆ. ಅಭಿ ವೃದ್ಧಿ, ಪ್ರಜಾಪ್ರಭುತ್ವ ಮತ್ತು ಘನತೆಯು ಭ್ರಮನಿರಸನ, ನಿರಾಶೆ ಮತ್ತು ಹತಾಶೆಯನ್ನು ಬದಲಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next