Advertisement

70 ವರ್ಷಗಳಲ್ಲಿ ಎಲ್ಲರಿಗೂ ಅವಕಾಶ ನೀಡಿದ್ದೀರಿ ಈಗ ನಮಗೆ 5 ವರ್ಷ ಅಧಿಕಾರ ಕೊಡಿ; ಪ್ರಧಾನಿ

01:53 PM Mar 20, 2021 | Team Udayavani |

ಕೋಲ್ಕತ್ತ:ಶುಕ್ರವಾರ ರಾತ್ರಿ ವಾಟ್ಸಪ್, ಫೇಸ್‍ ಬುಕ್ ಹಾಗೂ ಇನ್‍ಸ್ಟಾಗ್ರಾಂ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದನ್ನು ಉದಾಹರಣೆಯಾಗಿಸಿಕೊಂಡು ಪ್ರಧಾನಿ ನರೇಂದ್ರ ಮೋದಿಯವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನ ಟೀಕಿಸಿದ್ದಾರೆ.

Advertisement

ವಿಧಾನಸಭೆ ಚುನಾವಣೆ ಹಿನ್ನೆಲೆ ಇಂದು (ಮಾ.20) ಪಶ್ಚಿಮ ಬಂಗಾಳದ ಖರಗಪುರದಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರಚಾರ ಜಾಥಾದಲ್ಲಿ ಟಿಎಂಸಿ ಹಾಗೂ ಕಾಂಗ್ರೆಸ್ ಸರ್ಕಾರಗಳ ವಿರುದ್ಧ ಹರಿಹಾಯ್ದರು.

ನಿನ್ನೆ ( ಶುಕ್ರವಾರ) ವಾಟ್ಸಪ್, ಇನ್‍ಸ್ಟಾಗ್ರಾಂ ಹಾಗೂ ಫೇಸ್‍ಬುಕ್ 50-55 ನಿಮಿಷಗಳ ವರೆಗೆ ಸ್ಥಗಿತಗೊಂಡಿದ್ದವು. ಇದರಿಂದ ಜನರು ಚಿಂತೆಗೆ ಒಳಗಾಗಿದ್ದರು. ಆದರೆ, ಪಶ್ಚಿಮ ಬಂಗಾಳದಲ್ಲಿ ಅಭಿವೃದ್ಧಿ ಕಾರ್ಯ ಹಾಗೂ ಜನರ  ಕನಸುಗಳು ಕಳೆದ 50 ರಿಂದ 55 ವರ್ಷಗಳಿಂದ ಸ್ಥಗಿತಗೊಂಡಿವೆ. ಮೊದಲು ಕಾಂಗ್ರೆಸ್ ನಂತರ ಎಡಪಕ್ಷಗಳು ಈಗ ಟಿಎಂಸಿ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿಯನ್ನ ಮರೆಮಾಚಿದ್ದಾರೆ ಎಂದು ಮೋದಿ ಆರೋಪಿಸಿದರು.

ಕಾಂಗ್ರೆಸ್ ಪಕ್ಷದಿಂದಾದ ನಷ್ಟವನ್ನು ನೀವು ನೋಡಿದ್ದೀರಿ. ಟಿಎಂಸಿ ನಿಮ್ಮ ಕನಸುಗಳನ್ನು ಹಾಳು ಮಾಡುತ್ತಿದೆ. ಕಳೆದ 70 ವರ್ಷಗಳಲ್ಲಿ ಎಲ್ಲರಿಗೂ ಅವಕಾಶ ನೀಡಿದ್ದೀರಿ. ಆದರೆ, ನಮಗೆ 5 ವರ್ಷ ನೀಡಿ. ಕಳೆದ 70 ವರ್ಷಗಳಿಂದ ಉಂಟಾದ ನಷ್ಟವನ್ನ ಪಶ್ಚಿಮ ಬಂಗಾಳದಲ್ಲಿ ಇಲ್ಲವಾಗಿಸುತ್ತೇವೆ. ನಿಮಗಾಗಿ ನಮ್ಮ ಜೀವನವನ್ನು ತ್ಯಾಗ ಮಾಡುತ್ತೇವೆ ಎಂದು ಮೋದಿ ಭರವಸೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next