Advertisement

NCP ಭ್ರಷ್ಟಾಚಾರದ ಬಗ್ಗೆ ಮಾತನಾಡಿದ ಮೋದಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು: ಶರದ್

08:51 PM Jul 08, 2023 | Team Udayavani |

ಮುಂಬೈ: ಎನ್‌ಸಿಪಿ ನಾಯಕರ ಬೃಹತ್ ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ ಹಾಗಾಗಿ ತಪ್ಪಿತಸ್ಥರನ್ನು ಶಿಕ್ಷಿಸಬೇಕು ಎಂದು ಶರದ್ ಪವಾರ್ ಶನಿವಾರ ಒತ್ತಾಯಿಸಿದ್ದಾರೆ.

Advertisement

ನಾಸಿಕ್ ಜಿಲ್ಲೆಯ ಯೋಲಾದಲ್ಲಿ ನಡೆದ ರ‍್ಯಾಲಿಯನ್ನು ಉದ್ದೇಶಿಸಿಮಾತನಾಡಿದ ಪವಾರ್, “ಪ್ರಧಾನಿ ಮೋದಿಯವರು ತಮ್ಮ ನಿಯಂತ್ರಣದಲ್ಲಿ ಎಲ್ಲಾ ರಾಜ್ಯ ಯಂತ್ರಗಳನ್ನು ಹೊಂದಿದ್ದಾರೆ. ಅವರು ಭ್ರಷ್ಟಾಚಾರ ಮಾಡಿದ ನಾಯಕರ ವಿರುದ್ಧ ಕ್ರಮಕೈಗೊಳ್ಳಬೇಕು ಮತ್ತು ಅವರನ್ನು ಶಿಕ್ಷಿಸಬೇಕು” ಎಂದು ಹೇಳಿದರು.

ಸೋದರಳಿಯ ಅಜಿತ್ ಪವಾರ್ ಮತ್ತು ಇತರ ಎಂಟು ಎನ್‌ಸಿಪಿ ಶಾಸಕರು ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ನೇತೃತ್ವದ ಸರಕಾರಕ್ಕೆ ಸೇರಿದ ಒಂದು ವಾರದ ನಂತರ, ಶರದ್ ಪವಾರ್ ಅವರು ಬಂಡಾಯ ಪಕ್ಷದ ನಾಯಕ ಮತ್ತು ಸಚಿವ ಛಗನ್ ಭುಜಬಲ್ ಅವರ ಕ್ಷೇತ್ರವಾದ ಯೋಲಾದಲ್ಲಿ ರ‍್ಯಾಲಿಯನ್ನು ನಡೆಸುವ ಮೂಲಕ ತಮ್ಮ ರಾಜ್ಯಾದ್ಯಂತದ ಪ್ರವಾಸವನ್ನು ಪ್ರಾರಂಭಿಸಿದರು.

ಭೋಪಾಲ್‌ನಲ್ಲಿ ಬಿಜೆಪಿ ಬೂತ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದ ಮೋದಿ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷವು 70,000 ಕೋಟಿ ರೂಪಾಯಿಗಳ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next