Advertisement

B. Y. Vijayendra ಭ್ರಷ್ಟ ಮುಕ್ತ ಭಾರತ ನಿರ್ಮಿಸಲು ಪ್ರಧಾನಿ ಮೋದಿ ಪಣ

07:10 PM Sep 17, 2024 | Shreeram Nayak |

ಶಿವಮೊಗ್ಗ: ಎನ್‌ಡಿಎ ನೇತೃತ್ವದ ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿ ಆಡಳಿತಕ್ಕೆ ಬಂದು 100 ದಿನಗಳಾಗಿವೆ. ಕಳೆದ 10 ವರ್ಷಗಳಲ್ಲಿ ಮೋದಿ ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಿಸಲು ಶ್ರಮಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ ಅವರು ಆಡಳಿತವನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಕಳೆದ 10 ವರ್ಷಗಳಿಂದ ಭಾರತದ ಎಲ್ಲಾ ವರ್ಗದ ಜನರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದಾರೆ. 2047ಕ್ಕೆ ಭಾರತ ಜಗತ್ತಿನಲ್ಲಿಯೇ ಅತ್ಯಂತ ಬಲಿಷ್ಠವಾಗಿ ಬೆಳೆಯಲಿದೆ. ಮುಖ್ಯವಾಗಿ ಭ್ರಷ್ಟಾಚಾರ ಮುಕ್ತ ಭಾರತವನ್ನಾಗಿಸಲು ಮೋದಿ ಪಣ ತೊಟ್ಟಿದ್ದಾರೆ ಎಂದರು.

ಕೇಂದ್ರ ಸರ್ಕಾರದ ಕಿಸಾನ್‌ ಸಮ್ಮಾನ್‌ ಯೋಜನೆಯಡಿ 17ನೇ ಕಂತನ್ನು ಬಿಡುಗಡೆ ಮಾಡಿದೆ. ಸುಮಾರು 9.3 ಕೋಟಿ ರೈತರಿಗೆ ಸುಮಾರು 20 ಸಾವಿರ ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಈಗಾಗಲೇ ವಿವಿಧ ಯೋಜನೆಗಳಡಿ 12 ಕೋಟಿ ರೈತರಿಗೆ ನೆರವು ನೀಡಲಾಗಿದೆ. ರಸ್ತೆ ಅಭಿವೃದ್ಧಿಗಾಗಿ 50600 ಕೋಟಿ ರೂ. ಖರ್ಚು ಮಾಡಲಾಗಿದೆ. ಆಯುಷ್ಮಾನ್‌ ಯೋಜನೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. 70 ವರ್ಷದ ಮೇಲ್ಪಟ್ಟವರಿಗೂ ಈ ಯೋಜನೆ ವಿಸ್ತರಿಸಲಾಗಿದೆ. ಇದರಿಂದ ಸುಮಾರು 6 ಕೋಟಿ ಹಿರಿಯರಿಗೆ ಲಾಭವಾಗುತ್ತದೆ. 4.5 ಕೋಟಿ ಕುಟುಂಬಗಳಿಗೆ ಈ ಯೋಜನೆ ತಲುಪುತ್ತಿದೆ. ಹಾಗೆಯೇ ಸ್ವಾತಂತ್ರ್ಯದ ನಂತರ ಪ್ರಮುಖವಾಗಿ ಮೂರು ಕ್ರಿಮಿನಲ್‌ ಕಾಯ್ದೆಗಳನ್ನು ಬದಲಾಯಿಸಲಾಗಿದೆ. ಹೀಗೆ ಕೇವಲ 100 ದಿನಗಳಲ್ಲಿ ನರೇಂದ್ರ ಮೋದಿ ಸರ್ಕಾರ ಅಭಿವೃದ್ಧಿಯ ದಾಪುಗಾಲು ಹಾಕಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.