ನವದೆಹಲಿ: ಕೋವಿಡ್-19 ಭಾರತದಲ್ಲಿ ತನ್ನ ಕಬಂಧಬಾಹುವನ್ನು ಚಾಚುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಈ ಕುರಿತು ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದ್ದು ದೇಶದ ಜನರು ತೆಗೆದುಕೊಳ್ಳಬೇಕಾದ ಮುನ್ನೇಚ್ಚರಿಕೆಗಳು ಸೇರಿದಂತೆ ಹಲವಾರು ವಿಚಾರಗಳನ್ನು ಈ ಸಂದರ್ಭದಲ್ಲಿ ಪ್ರಸ್ತಾಪಿಸಲಾಗುತ್ತದೆ ಎಂದು ಮಾಹಿತಿ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಬುಧವಾರ ತಜ್ಞರು ಮತ್ತು ವೈದ್ಯಾಧಿಕಾರಿಗಳ ಜೊತೆಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದು, ಸೋಂಕು ತಡೆಗಟ್ಟುವ ಮಾರ್ಗೋಪಾಯಗಳು, ಹಾಗೂ ಜನರು ತೆಗೆದುಕೊಳ್ಳಬೇಕಾದ ಮುನ್ನೇಚ್ಚರಿಕಾ ಕ್ರಮಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಮಾಧ್ಯಮ ವರದಿ ಮಾಡಿದೆ.
ಕೋವಿಡ್-19 ಭೀತಿ ಹೆಚ್ಚಾದ ಹಿನ್ನಲೆಯಲ್ಲಿ ಸೊಂಕು ಪತ್ತೆ ಸಾಮಾರ್ಥ್ಯ ಹೆಚ್ಚಳಕ್ಕಾಗಿ ಮಾನ್ಯತೆ ಪಡೆದಿರುವ ಖಾಸಗಿ ಪ್ರಯೋಗಾಲಯಗಳಿಗೂ ವೈರಸ್ ಪರೀಕ್ಷೆ ನಡೆಸುವ ಅವಕಾಶ ಕಲ್ಪಿಸಲಾಗಿದೆ.
ಈಗಾಗಲೇ ಕೋವಿಡ್-19 ವೈರಸ್ 170 ರಾಷ್ಟ್ರಗಳಿಗೆ ವ್ಯಾಪಿಸಿದ್ದು, 2ಲಕ್ಷಕ್ಕೂ ಹೆಚ್ಚು ಜನರು ಸೋಂಕುವಿಗೆ ತುತ್ತಾಗಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.