Advertisement

ಇಂದಿನಿಂದ 3 ದಿನಗಳ ಕಾಲ ಪ್ರಧಾನಿ ಮೋದಿ ಗುಜರಾತ್ ಪ್ರವಾಸ

06:46 PM Oct 08, 2022 | Team Udayavani |

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರದಿಂದ ಒಟ್ಟು ಮೂರು ದಿನಗಳ ಕಾಲ ಗುಜರಾತ್‌ ಪ್ರವಾಸದಲ್ಲಿರಲಿದ್ದಾರೆ.

Advertisement

ರಾಜ್ಯದಲ್ಲಿ ಅವರು 14,500 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಶಿಲಾನ್ಯಾಸ ಮತ್ತು ಉದ್ಘಾಟನೆ ಮಾಡಲಿದ್ದಾರೆ.

ಭಾನುವಾರ ಮೆಹ್ಸಾನಾದ ಮೊಧೆರಾದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸೋಮವಾರ ಬರುಚ್‌ನ ಅಮೋದ್‌ನಲ್ಲಿ, ಅಹಮದಾಬಾದ್‌ ಹಾಗೂ ಜಾಮ್‌ನಗರದಲ್ಲಿ ವಿವಿಧ ಯೋಜನೆಗಳನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

ಮಂಗಳವಾರ ಅಹಮದಾಬಾದ್‌ನಲ್ಲಿ ಸಾರ್ವಜನಿಕ ಆಸ್ಪತ್ರೆ ಉದ್ಘಾಟಿಸಿ, ಉಜ್ಜಯಿನಿಯಲ್ಲಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಮಾಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next