Advertisement

2023-24 ರ ಬಜೆಟ್‌: ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ಪ್ರಧಾನಿ

05:09 PM Dec 05, 2022 | Team Udayavani |

ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 2023-24 ರ ಕೇಂದ್ರ ಬಜೆಟ್‌ಗೆ ಮುಂಚಿತವಾಗಿ, ಮುಂದಿನ ತಿಂಗಳು ರಾಷ್ಟ್ರ ರಾಜಧಾನಿಯಲ್ಲಿ ‘ಮುಖ್ಯ ಕಾರ್ಯದರ್ಶಿಗಳ ಎರಡನೇ ರಾಷ್ಟ್ರೀಯ ಸಮ್ಮೇಳನ’ದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸರಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement

ಮುಖ್ಯ ಕಾರ್ಯದರ್ಶಿಗಳ ಎರಡನೇ ರಾಷ್ಟ್ರೀಯ ಸಮ್ಮೇಳನ ಜನವರಿಯಲ್ಲಿ ದೆಹಲಿಯಲ್ಲಿ ನಡೆಯಲಿದೆ ಮತ್ತು ಕೇಂದ್ರ ಮತ್ತು ರಾಜ್ಯ ಸರಕಾರಗಳ ನಡುವಿನ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರ ಸಚಿವಾಲಯಗಳ ಯುವ ಜಿಲ್ಲಾಧಿಕಾರಿಗಳು ಮತ್ತು ಮ್ಯಾಜಿಸ್ಟ್ರೇಟ್‌ಗಳು ಸೇರಿದಂತೆ ಹಲವಾರು ಅಧಿಕಾರಿಗಳು ಸಮಾವೇಶದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1, 2023 ರಂದು ಸಂಸತ್ತಿನಲ್ಲಿ 2023-24ರ ಬಜೆಟ್ ಮಂಡಿಸಲಿದ್ದಾರೆ.

ಈ ವರ್ಷದ ಜೂನ್‌ನಲ್ಲಿ, ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಪ್ರಧಾನ ಕಾರ್ಯದರ್ಶಿಗಳ ಮೊದಲ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆಯನ್ನು ಮೋದಿ ವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next