Advertisement

ವಿಶ್ವದ ಅತಿ ಉದ್ದದ ನದಿ ವಿಹಾರ ನೌಕೆಗೆ ಚಾಲನೆ ನೀಡಲಿರುವ ಪ್ರಧಾನಿ

04:05 PM Jan 08, 2023 | Team Udayavani |

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ(ಜ13) ವಾರಾಣಸಿಯಿಂದ ವಿಶ್ವದ ಅತಿ ಉದ್ದದ ನದಿ ವಿಹಾರ ನೌಕೆ ‘ಎಂವಿ ಗಂಗಾ ವಿಲಾಸ್’ಗೆ ಚಾಲನೆ ನೀಡಲಿದ್ದಾರೆ ಎಂದು ಅಧಿಕೃತ ಹೇಳಿಕೆಯೊಂದು ತಿಳಿಸಿದೆ.

Advertisement

ಐಷಾರಾಮಿ ಕ್ರೂಸ್ ಭಾರತ ಮತ್ತು ಬಾಂಗ್ಲಾದೇಶದ 5 ರಾಜ್ಯಗಳಲ್ಲಿ 27 ನದಿಗಳಲ್ಲಿ 3,200 ಕಿಲೋಮೀಟರ್‌ಗಿಂತಲೂ ಹೆಚ್ಚು ದೂರವನ್ನು ಕ್ರಮಿಸುತ್ತದೆ ಎಂದು ಹೇಳಿಕೆ ತಿಳಿಸಿದೆ.

ಎಂವಿ ಗಂಗಾ ವಿಲಾಸ್ ಭಾರತವನ್ನು ವಿಶ್ವದ ನದಿ ವಿಹಾರ ನಕ್ಷೆಯಲ್ಲಿ ಸೇರಿಸುತ್ತದೆ ಎಂದು ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗ ಸಚಿವ ಸರ್ಬಾನಂದ ಸೋನಾವಾಲ್ ಅವರನ್ನು ಉಲ್ಲೇಖಿಸಿ ಹೇಳಿಕೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next