Advertisement

16ಕ್ಕೆ ಚಿಣ್ಣರ ಜತೆ ಪ್ರಧಾನಿ ನರೇಂದ್ರ ಮೋದಿ ಮಾತು

11:08 AM Feb 03, 2018 | Sharanya Alva |

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಫೆ.16ರಂದು ನವದೆಹಲಿಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಪರೀಕ್ಷೆಯ ಒತ್ತಡ, ವಿದ್ಯಾಭ್ಯಾಸದ ಬಗ್ಗೆ ಅವರು ಮಾತನಾಡಲಿದ್ದಾರೆ. “ಟೌನ್‌ ಹಾಲ್‌ ಮೀಟಿಂಗ್‌’ ಎಂಬ ಶಿರೋನಾಮೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. 

Advertisement

ವಿದ್ಯಾರ್ಥಿಗಳ ಜತೆ ಮಾತನಾಡುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಲಿದ್ದಾರೆ. ದೇಶದ ವಿವಿಧ ಭಾಗಗಳ ವಿದ್ಯಾರ್ಥಿಗಳಿಂದ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ. ಒತ್ತಡವಿಲ್ಲದೆ ಪರೀಕ್ಷೆ ಎದುರಿಸುವಂತಾಗಬೇಕು ಎಂಬ ಉದ್ದೇಶದಿಂದ ಅವರು ಮಾತನಾಡಲಿದ್ದಾರೆ.

ಕಳೆದ ವರ್ಷ “ಮನ್‌ ಕಿ ಬಾತ್‌’ ಕಾರ್ಯಕ್ರಮದಲ್ಲಿ ಅದೇ ವಿಚಾರದ ಬಗ್ಗೆ ಮಾತನಾಡಿದ್ದರು. ಇದರ ಜತೆಗೆ ಶನಿವಾರ”ಎಕ್ಸಾಮ್‌ ವಾರಿಯರ್ಸ್‌’ ಎಂಬ ಪುಸ್ತಕ ಬಿಡುಗಡೆಯಾಗಲಿದೆ. ಇದು ಪ್ರಧಾನಿ ಮೋದಿಯವರ ಐದನೇ ಕೃತಿಯಾಗಿದೆ. ಪ್ರಧಾನಿ ಹುದ್ದೆಯಲ್ಲಿ ಇದು ಅವರ ಮೊದಲ ಪುಸ್ತಕವಾಗಲಿದೆ. ಕೇಂದ್ರ ಸಚಿವರಾದ ಸುಷ್ಮಾ ಸ್ವರಾಜ್‌, ಪ್ರಕಾಶ್‌ ಜಾವಡೇಕರ್‌ ಇರಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next