ನವದೆಹಲಿ: ಚೆನ್ನೈ ವಿಮಾನ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಂಯೋಜಿತ ಟರ್ಮಿನಲ್ ಕಟ್ಟಡವನ್ನು ಶನಿವಾರ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಈ ಟರ್ಮಿನಲ್ ಅನ್ನು ಸುಮಾರು 1,260 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.
ʻಸುಮಾರು 2,20,972 ಚ.ಮೀ ವಿಸ್ತೀರ್ಣ ಹೊಂದಿರುವ ಈ ಟರ್ಮಿನಲ್ ಚೆನ್ನೈ ವಿಮಾನನಿಲ್ದಾಣದ ಪ್ರಯಾಣಿಕ ದಟ್ಟಣೆ ಮತ್ತು ಏರ್ ಟ್ರಾಫಿಕ್ ನಿಯಂತ್ರಣಕ್ಕೆ ಸಹಕಾರಿಯಾಗಲಿದೆ. ಇದು ಪ್ರಯಾಣಿಕರಿಗೆ ಉನ್ನತ ಮಟ್ಟದ ಸೌಲಭ್ಯವನ್ನು ಒದಗಿಸುವ ಸರ್ಕಾರದ ಬದ್ಧತೆಯನ್ನು ಎತ್ತಿ ತೋರಿಸುತ್ತದೆʼ ಎಂದು ನಾಗರೀಕ ವಿಮಾನಯಾನ ಸಚಿವಾಲಯ ಟ್ವೀಟ್ ಮಾಡಿದೆ.
Related Articles
ಈಗ ನಿರ್ಮಾಣವಾದ ಟಿ-2 ಮೂಲಕ ಚೆನ್ನೈ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರ ಸಂಖ್ಯೆಯನ್ನು ವರ್ಷಕ್ಕೆ 23 ಮಿಲಿಯನ್‌ನಿಂದ 30 ಮಿಲಿಯನ್‌ಗೆ ಹೆಚ್ಚಿಸಬಹುದಾಗಿದೆ.
ಪ್ರಧಾನಿ ನರೇಂದ್ರ ಮೋದಿ ಚೆನ್ನೈ ಏರ್‌ಪೋರ್ಟ್‌ನ ಟರ್ಮಿನಲ್‌ನ ಮನಮೋಹಕ ಫೊಟೋಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು ʻಇದು ಸಂಪರ್ಕವನ್ನು ಹೆಚ್ಚಿಸುತ್ತದೆ ಮತ್ತು ಸ್ಥಳಿಯ ವಾಣಿಜ್ಯ ವಹಿವಾಟಿಗೂ ಸಹಕಾರಿಯಾಗಲಿದೆʼ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: PM Modi ಗೊಂದಲಗಳಿಲ್ಲದೆ ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ : ಶಾ