Advertisement

G20 ಗೂ ಮುನ್ನ ಇಂಡೋನೇಷ್ಯಾಕ್ಕೆ ಪ್ರಧಾನಿ ಮೋದಿ

12:13 AM Sep 03, 2023 | Team Udayavani |

ಹೊಸದಿಲ್ಲಿ: ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆಗೆ ದೊಡ್ಡ ಮಟ್ಟದಲ್ಲಿ ಸಿದ್ಧತೆ ನಡೆದಿರುವಂತೆಯೇ, ಪ್ರಧಾನಿ ನರೇಂದ್ರ ಮೋದಿ ಸೆ. 6 ಮತ್ತು 7ರಂದು ಆಸಿಯಾನ್‌ ಸಭೆಗೆಂದು ಇಂಡೋನೇಷ್ಯಾಕ್ಕೆ ತೆರಳಲಿದ್ದಾರೆ.

Advertisement

ಜಕಾರ್ತಾದಲ್ಲಿ ನಡೆಯಲಿರುವ ಆಸಿಯಾನ್‌ ಭಾರತ, ಪೂರ್ವ ಏಷ್ಯಾ ಶೃಂಗಗಳಲ್ಲಿ ಪಾಲ್ಗೊಳ್ಳ ಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ವಿಶೇಷವೆಂದರೆ ಸೆ. 9-10ರಂದು ಜಿ20 ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಸೆ. 7ರಂದೇ ಅಮೆರಿಕ ಅಧ್ಯಕ್ಷ ಬೈಡೆನ್‌ ಕೂಡ ಭಾರತಕ್ಕೆ ಆಗಮಿಸುತ್ತಿದ್ದು, ಸೆ. 8ರಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಹತ್ವದ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ.

ಅಮೆರಿಕದ ಶ್ವೇತ ಭವನ ಬೈಡೆನ್‌ ಅವರ ಭೇಟಿಯನ್ನು ಖಾತರಿ ಪಡಿಸಿದೆ. ದ್ವಿಪಕ್ಷೀಯ ಸಭೆಯಲ್ಲಿ ಉಭಯ ರಾಷ್ಟ್ರಗಳ ನಡುವಿನ ಸಂಬಂಧವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಚರ್ಚೆಗಳು ನಡೆಯಲಿದೆ. ಇದಲ್ಲದೇ ಹವಾ ಮಾನ ಬದಲಾವಣೆ, ರಷ್ಯಾ- ಉಕ್ರೇನ್‌ ಸಂಘರ್ಷಗಳಿಂದ ಜಾಗತಿಕ ರಾಷ್ಟ್ರ ಗಳ ಮೇಲಾಗುತ್ತಿರುವ ವ್ಯತಿರಿಕ್ತ ಪರಿಣಾಮ  ಸೇರಿದಂತೆ ಅನೇಕ ಜಾಗತಿಕ ಸಮಸ್ಯೆಗಳ ಕುರಿತು ಚರ್ಚಿಸಲಿದ್ದಾರೆ ಎಂದು ಶ್ವೇತಭವನ ಪ್ರಕಟನೆೆಯಲ್ಲಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next