ನವದೆಹಲಿ: ಮಕ್ಕಳಿಗೆ ಎದುರಾಗುವ ಸಮಸ್ಯೆಗಳ ನಿವಾರಣೆಯಲ್ಲಿ ಕುಟುಂಬದ ಪಾತ್ರ ದೊಡ್ಡದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ನವದೆಹಲಿಯಲ್ಲಿ ಮಂಗಳವಾರ ಪ್ರಸಕ್ತ ಸಾಲಿನ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ ಪಡೆದ ಕರ್ನಾಟಕದ ರಿಶಿ ಶಿವ ಪ್ರಸನ್ನ ಸೇರಿದಂತೆ 11 ಮಂದಿ ಬಾಲಕರ ಜತೆಗೆ ಚರ್ಚಿಸಿದ ಸಂದರ್ಭದಲ್ಲಿ ಈ ಅಂಶ ಪ್ರಸ್ತಾಪಿಸಿದ್ದಾರೆ.
ಆರಂಭದಲ್ಲಿ ಸಣ್ಣ ಸಮಸ್ಯೆಗಳನ್ನು ನಿವಾರಿಸಿಕೊಂಡು ವಿಶ್ವಾಸ ವೃದ್ಧಿಸಿಕೊಳ್ಳಬೇಕು. ಅದುವೇ ಜೀವನದಲ್ಲಿ ಎದುರಾಗುವ ಬೃಹತ್ ಸಮಸ್ಯೆಗಳನ್ನು ಎದುರಿಸಿ ನಿವಾರಿಸಲು ಸಹಾಯ ಮಾಡುತ್ತದೆ ಎಂದರು. ಮಕ್ಕಳಿಗೆ ಸಾಮಾನ್ಯವಾಗಿ ಎದುರಾಗುವ ಸಮಸ್ಯೆಗಳು ಹಾಗೂ ಅವುಗಳ ಪರಿಹಾರದ ಬಗ್ಗೆಯೂ ಪ್ರಧಾನಿ ಮೋದಿ ಪ್ರಶಸ್ತಿ ವಿಜೇತರ ಜತೆಗೆ ಚರ್ಚೆ ನಡೆಸಿದ್ದಾರೆ.