Advertisement

Kalaburagi: ನಾಳೆ ಕಲಬುರಗಿಗೆ ಪ್ರಧಾನಿ ಮೋದಿ

11:49 PM Jan 17, 2024 | Team Udayavani |

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಜ.19ರಂದು ದಿಲ್ಲಿಯಿಂದ ವಿಶೇಷ ವಿಮಾನದ ಮೂಲಕ ಬೆಳಗ್ಗೆ 9.35ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.

Advertisement

ಬಳಿಕ ಬೆಳಗ್ಗೆ 9.40ಕ್ಕೆ ಕಲಬುರಗಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಪ್ರಯಾಣಿಸಿ ಅಲ್ಲಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮರಳಿ ಹೆಲಿಕಾಪ್ಟರ್‌ ಮೂಲಕ ಮಧ್ಯಾಹ್ನ 1 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಬಳಿಕ ಮಧ್ಯಾಹ್ನ 1.05ಕ್ಕೆ ಕಲಬುರಗಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ. ಈ ಕುರಿತು ತಾತ್ಕಾಲಿಕ ಪ್ರವಾಸ ಪಟ್ಟಿ ಪ್ರಕಟವಾಗಿದೆ.

ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್‌ ಹಾಗೂ ಕಲಬುರಗಿ ನಗರ ಪೊಲೀಸ್‌ ಆಯುಕ್ತ ಆರ್‌.ಚೇತನ ಬಂದೋಬಸ್ತ್ ಹಾಗೂ ಶಿಷ್ಟಾಚಾರ ಕುರಿತು ಅಧಿಕಾರಿಗಳ ಸಭೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next