ಕೊಚ್ಚಿ: ಕೇರಳದ ಬಂದರು ನಗರವಾದ ಕೊಚ್ಚಿಯ ಸುತ್ತಮುತ್ತಲಿನ ಹತ್ತು ದ್ವೀಪಗಳನ್ನು ಸಂಪರ್ಕಿಸುವ ದೇಶದ ಮೊದಲ ವಾಟರ್ ಮೆಟ್ರೋ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಚಾಲನೆ ನೀಡಲಿದ್ದಾರೆ.
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ತಯಾರಿಸಿದ ಎಂಟು ಎಲೆಕ್ಟ್ರಿಕ್ ಹೈಬ್ರಿಡ್ ಬೋಟ್‌ಗಳೊಂದಿಗೆ ಮೆಟ್ರೋ ಯೋಜನೆಯು ಪ್ರಾರಂಭವಾಗಲಿದೆ ಎಂದು ವಾಟರ್ ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.
ವಾಟರ್ ಮೆಟ್ರೋ ಒಂದು ವಿಶಿಷ್ಟವಾದ ನಗರ ಸಮೂಹ ಸಾರಿಗೆ ವ್ಯವಸ್ಥೆಯಾಗಿದ್ದು, ಸಾಂಪ್ರದಾಯಿಕ ಮೆಟ್ರೋ ವ್ಯವಸ್ಥೆಯಂತಹ ಅನುಭವ ಮತ್ತು ಸುಲಭವಾಗಿ ಪ್ರಯಾಣಿಸಬಹುದಾಗಿದೆ. ಕೊಚ್ಚಿಯಂತಹ ನಗರಗಳಲ್ಲಿ ಇದು ತುಂಬಾ ಉಪಯುಕ್ತವಾಗಿದೆ.
ಇದು ಕೊಚ್ಚಿ ಮತ್ತು ಸುತ್ತಮುತ್ತಲಿನ 10 ದ್ವೀಪಗಳನ್ನು ಸಂಪರ್ಕಿಸುವ ಕೇರಳದ ಕನಸಿನ ಯೋಜನೆಯಾಗಿದೆ. ಇದಕ್ಕೆ 78 ಎಲೆಕ್ಟ್ರಿಕ್ ಬೋಟ್‌ಗಳು ಮತ್ತು 38 ಟರ್ಮಿನಲ್‌ಗಳೊಂದಿಗೆ 1,136.83 ಕೋಟಿ ವೆಚ್ಚವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಟ್ವೀಟ್ ನಲ್ಲಿ ಮಾಹಿತಿ ನೀಡಿದ್ದಾರೆ.
ಕೊಚ್ಚಿ ವಾಟರ್ ಮೆಟ್ರೋವನ್ನು 1,136.83 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ ಕೊಚ್ಚಿ ವಾಟರ್ ಮೆಟ್ರೋ ಯೋಜನೆಯನ್ನು ರಾಜ್ಯದ ಕನಸಿನ ಯೋಜನೆ ಎಂದು ಬಣ್ಣಿಸಿದ್ದಾರೆ.
ದಕ್ಷಿಣ ರಾಜ್ಯದ ಸಾರಿಗೆ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಿಗೆ ರೋಚಕ ಸಮಯಗಳು ಮುಂದಿವೆ ಎಂದು ಅವರು ಹೇಳಿದ್ದಾರೆ.