Advertisement
ಇದು ರಾಷ್ಟ್ರೀಯ ನದಿ ಜೋಡಣೆ ಕಾರ್ಯನೀತಿಯಡಿಯಲ್ಲಿ ಕೈಗೊಳ್ಳಲಾಗುತ್ತಿರುವ ಮೊದಲ ಯೋಜನೆಯಾಗಿದೆ.
ಕೆನ್ ಬೆತ್ವಾ ನದಿ ಯೋಜನೆಗೆ ಸಂಬಂಧಿಸಿದಂತೆ 2021ರಲ್ಲಿ ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಕೇಂದ್ರ ಸರ್ಕಾರಗಳು ಒಪ್ಪಂದ ಮಾಡಿಕೊಂಡಿದ್ದವು. ಇದಕ್ಕಾಗಿ ಒಟ್ಟು 44,605 ಕೋಟಿ ರೂ. ವೆಚ್ಚ ಮಾಡಲು ಕೇಂದ್ರ ಸಚಿವ ಸಂಪುಟ ಕಳೆದ ವರ್ಷ ಒಪ್ಪಿಗೆ ನೀಡಿತ್ತು.
Related Articles
Advertisement
ಮಧ್ಯಪ್ರದೇಶದ 10 ಜಿಲ್ಲೆಗಳ 44 ಲಕ್ಷ ಮಂದಿ ಹಾಗೂ ಉತ್ತರ ಪ್ರದೇಶದ 21 ಲಕ್ಷ ಮಂದಿಗೆ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದೆ. ಅಲ್ಲದೇ ಈ ಯೋಜನೆಯಿಂದ 103 ಮೆ.ವ್ಯಾ. ಜಲವಿದ್ಯುತ್ ಹಾಗೂ 27 ಮೆ.ವ್ಯಾ. ಸೌರವಿದ್ಯುತ್ ತಯಾರಿಸಲಾಗುತ್ತದೆ.
ಏನಿದು ಕೆನ್ ಬೆತ್ವಾ ಯೋಜನೆ?ಮಧ್ಯಪ್ರದೇಶದ ಪನ್ನಾ ಹುಲಿ ಸಂರಕ್ಷಿತ ಪ್ರದೇಶದಲ್ಲಿರುವ ಕೆನ್ ನದಿಯಿಂದ ಉತ್ತರ ಪ್ರದೇಶದಲ್ಲಿರುವ ಬೆತ್ವಾ ನದಿಯನ್ನು ಜೋಡಣೆ ಮಾಡುವ ಯೋಜನೆ ಇದಾಗಿದೆ. ಇದಕ್ಕಾಗಿ ಪನ್ನಾದಲ್ಲಿ ಕೆನ್ ನದಿಗೆ 77 ಮೀ. ಎತ್ತರ ಹಾಗೂ 2.13 ಕಿ.ಮೀ. ಉದ್ದದ ಅಣೆಕಟ್ಟನ್ನು ನಿರ್ಮಾಣ ಮಾಡಲಾಗುತ್ತದೆ. ಬಳಿಕ 221 ಕಿ.ಮೀ. ಉದ್ದದ ಕಾಲುವೆ ನಿರ್ಮಾಣ ಮಾಡುವ ಮೂಲಕ ಬೆತ್ವಾ ನದಿಗೆ ನೀರನ್ನು ಹರಿಸಲಾಗುತ್ತದೆ.