Advertisement

ಕೋವಿಡ್ ಲಸಿಕೆ ಹಂಚಿಕೆ ಚರ್ಚೆ: ಜನವರಿ 11ರಂದು ಎಲ್ಲಾ ಸಿಎಂಗಳ ಜತೆ ಪ್ರಧಾನಿ ಮೋದಿ ಸಭೆ

06:45 PM Jan 08, 2021 | Team Udayavani |

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ (ಜನವರಿ 11, 2021) ಕೋವಿಡ್ ಲಸಿಕೆ ಹಂಚಿಕೆ ಕುರಿತಂತೆ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಲಿದ್ದಾರೆ ಎಂದು ವರದಿ ತಿಳಿಸಿದೆ.

Advertisement

ವಿಡಿಯೋ ಕಾನ್ಫರೆನ್ಸ್ ಮೂಲಕ ಸೋಮವಾರ ಸಂಜೆ 4ಗಂಟೆಗೆ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಜತೆ ಕೋವಿಡ್ ಲಸಿಕೆ ಹಂಚಿಕೆ ಕುರಿತು ಚರ್ಚೆ ನಡೆಸಲಿದ್ದಾರೆ. ದೇಶದಲ್ಲಿ ಮತ್ತೊಂದು ಲಸಿಕೆಯ ಡ್ರೈ ರನ್ ನಡೆಯಲಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ ಎಂದು ವರದಿ ಹೇಳಿದೆ.

ಭಾನುವಾರ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಆಕ್ಸ್ ಫರ್ಡ್ ನ ಆಸ್ಟ್ರಾಜೆನಿಕಾ ಕೋವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಲಸಿಕೆ ಡ್ರೈರನ್ ಗೆ ಅನುಮತಿ ನೀಡಿದೆ.

ಈಗಾಗಲೇ ಹಲವು ರಾಜ್ಯಗಳಲ್ಲಿ ಕೋವಿಡ್  ಲಸಿಕೆಯ ಡ್ರೈರನ್ ನಡೆದಿದ್ದು, ಮುಂದಿನ ವಾರದಿಂದ ದೇಶದ ಎಲ್ಲಾ ರಾಜ್ಯಗಳಲ್ಲಿಯೂ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಆರಂಭವಾಗಲಿದೆ ಎಂದು ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next