Advertisement

ಆಗಾಗ ಪ್ರಧಾನಿ ಮೋದಿ ರಾಜ್ಯಕ್ಕೆ: ಬಿ.ಎಸ್. ಯಡಿಯೂರಪ್ಪ ಹೇಳಿಕೆ

03:32 PM Aug 27, 2022 | Team Udayavani |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರಿಗೆ ಆಗಾಗ ರಾಜ್ಯಕ್ಕೆ ಹೆಚ್ಚು ಬರಬೇಕು ಅಂತಾ ಹೇಳಿದ್ದೇನೆ, ಅವರು ಒಪ್ಪಿಕೊಂಡಿದ್ದಾರೆ ಎಂದು ಮಾಜಿ ಸಿಎಂ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾದ ಬಿ.ಎಸ್. ಯಡಿಯೂರಪ್ಪ ಅವರು ಶನಿವಾರ ಹೇಳಿಕೆ ನೀಡಿದ್ದಾರೆ.

Advertisement

ಪ್ರಧಾನಿ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಜೊತೆ ಸುಧೀರ್ಘವಾಗಿ ಮಾತಾಡಿದ್ದೇನೆ. ಕರ್ನಾಟಕದ ರಾಜಕೀಯ ಪರಿಸ್ಥಿತಿಗಳ ಅವರು ತಿಳಿದುಕೊಳ್ಳುವ ಪ್ರಯತ್ನ ಮಾಡಿದ್ದಾರೆ.140ಕ್ಕೂ ಹೆಚ್ಚು ಸೀಟು ಗೆದ್ದು ಅಧಿಕಾರಕ್ಕೆ ಬರುತ್ತೇವೆ ಎಂದು ಭರವಸೆ ಕೊಟ್ಟಿದ್ದೇನೆ ಎಂದರು.

ಸೆಪ್ಟೆಂಬರ್ 2 ರಂದು ಮೋದಿ ಮಂಗಳೂರಿಗೆ ಬಂದಾಗ ಲಕ್ಷಾಂತರ ಜನ ಸೇರಿಸಿ ದೊಡ್ಡ ಕಾರ್ಯಕ್ರಮ ಮಾಡುತ್ತೇವೆ. ಸಚಿವರು ಎಲ್ಲರೂ ಸೇರಿ ನಾವು ರಾಜ್ಯದಲ್ಲಿ ಪ್ರವಾಸ ಮಾಡುತ್ತೇವೆ. ಯಾವುದೇ ಶಕ್ತಿ ನಾವು ಅಧಿಕಾರಕ್ಕೆ ಬರುವುದನ್ನು ತಡೆಯಲು ಸಾಧ್ಯವಿಲ್ಲ. ಮತ್ತೆ ಪಕ್ಷ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿದ್ದೇವೆ, ಜನ ಆಶೀರ್ವಾದ ಮಾಡುವ ವಿಶ್ವಾಸ ನನಗಿದೆ ಎಂದರು.

ನಡ್ಡಾ ಜತೆಯೂ ತಿಂಗಳಿಗೊಮ್ಮೆ ಒಂದೊಂದು ಕಾರ್ಯಕ್ರಮಕ್ಕೆ ಬರಬೇಕು ಅಂತಾ ಹೇಳಿದ್ದೇನೆ, ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ನ ಭ್ರಮಗೆ ಅವಕಾಶ ಕೊಡದೇ ನಾವೆಲ್ಲರೂ ಒಟ್ಟಾಗಿ ಸೇರಿ ಬಿಜೆಪಿ ಅಧಿಕಾರಕ್ಕೆ ತರುತ್ತೇವೆ. 140 ಕ್ಕೂ ಹೆಚ್ಚು ಸ್ಥಾನ ಗೆದ್ದು ಸರ್ಕಾರ ರಚನೆ ಮಾಡುತ್ತೇವೆ. ಇನ್ನೂ ನಾಲ್ಕಾರು ದಿನಗಳಲ್ಲಿ ನಾವು ಒಟ್ಟಿಗೆ ಸೇರಿ ಪ್ರವಾಸ ಮಾಡುತ್ತೇವೆ ಎಂದರು.

ಸರ್ಕಾರದ ಮೇಲೆ 40% ಕಮಿಷನ್ ಆರೋಪ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿ, ಮೂರ್ಖರು ಮಾತಾಡುತ್ತಾರೆ. ಯಾವನೋ ಒಬ್ಬನಿಗೆ ಹೇಳಿಕೊಟ್ಟು ಮಾತಾಡಿಸಿದ ತಕ್ಷಣ ಸುಳ್ಳು ಸತ್ಯ ಆಗಲು ಸಾಧ್ಯವಿಲ್ಲ. ಲೋಕಾಯುಕ್ತಕ್ಕೆ ಬೇಕಾದರೆ ದೂರು ಕೊಟ್ಟು ತನಿಖೆ ಮಾಡಿಸಲಿ, ಅಭ್ಯಂತರವಿಲ್ಲ. ಅನಗತ್ಯ ಆರೋಪ ಮಾಡಿ ಅದನ್ನು ದೊಡ್ಡದು ಮಾಡುವ ಪ್ರಯತ್ನವನ್ನು ಉದ್ದೇಶಪೂರ್ವಕವಾಗಿ ಸಿದ್ದರಾಮಯ್ಯ ಮಾಡಿಸುತ್ತಿದ್ದಾರೆ. ಬಹುಷ: ಇದರಿಂದ ಅವರದ್ದು ಏನೂ ನಡೆಯುವುದಿಲ್ಲ, ವಿಧಾನ ಮಂಡಲ‌ ಅಧಿವೇಶನದಲ್ಲಿ ಸರ್ಕಾರದ ತಕ್ಕ ಉತ್ತರ ನಾವು ಕೊಡುತ್ತೇವೆ. ಸರ್ಕಾರದ ಮೇಲೆ ಯಾವ ಪರಿಣಾಮವೂ ಬೀರುವುದಿಲ್ಲ.ಇದು ಸುಳ್ಳು ಆರೋಪ ಎಂದು ಶ್ರೀಸಾಮಾನ್ಯನಿಗೂ ಗೊತ್ತಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next