Advertisement

ಅಜಾತಶತ್ರು ವಾಜಪೇಯಿ ಜನ್ಮದಿನ: ಪ್ರಧಾನಿ ಮೋದಿಯಿಂದ ಲಕ್ನೋದಲ್ಲಿಂದು ಕಂಚಿನ ಪ್ರತಿಮೆ ಅನಾವರಣ

10:03 AM Dec 26, 2019 | Mithun PG |

ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸ್ಥಾಪಕರಲ್ಲಿ ಒಬ್ಬರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಹಿನ್ನಲೆ, ಅವರ 25 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಲಕ್ನೋದ ಲೋಕ ಭವನದಲ್ಲಿ ಅನಾವರಣಗೊಳಿಸಲಿದ್ದಾರೆ.

Advertisement

ಕಾರ್ಯಕ್ರಮಕ್ಕಾಗಿ  ಸಿದ್ಧತೆಗಳು ಭರದಿಂದ ನಡೆಯುತ್ತಿದ್ದು ಭಾರೀ ಭದ್ರತೆಯನ್ನು ಏರ್ಪಡಿಸಲಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ಅವರು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ, ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ವಿಶ್ವವಿದ್ಯಾಲಯದ  ಶಂಕು ಸ್ಥಾಪನೆಯನ್ನು ನೆರವೇರಿಸಲಿದ್ದಾರೆ. ಇದಕ್ಕಾಗಿ ಉತ್ತರ ಪ್ರದೇಶ ಸರ್ಕಾರ ಈಗಾಗಲೇ 50 ಎಕರೆ ಭೂಮಿಯನ್ನು ಹಸ್ತಾಂತರಿಸಿದೆ.

ಅಟಲ್ ಬಿಹಾರಿ ವಾಜಪೇಯಿ  ಜನ್ಮದಿನವನ್ನು ಉತ್ತಮ ಆಡಳಿತ ದಿನವೆಂದು ಗುರುತಿಸಲಾಗಿದೆ. ಅಜಾತಶತ್ರುವಾಗಿದ್ದ ಇವರು 2015ರಲ್ಲಿ ಭಾರತ ರತ್ನ ಪ್ರಶಸ್ತಿಗೆ ಭಾಜನರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next