Advertisement

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

07:41 PM Apr 22, 2024 | Team Udayavani |

ಶಿರಸಿ: ಪ್ರಧಾನಿ ನರೇಂದ್ರ‌ ಮೋದಿ ಅವರು‌ ಚುನಾವಣ ಪ್ರಚಾರದ ಹಿನ್ನಲೆಯಲ್ಲಿ ಉತ್ತರ ಕನ್ನಡಕ್ಕೆ ಏ.28 ಕ್ಕೆ ಆಗಮಿಸುವ ಸಾಧ್ಯತೆಗಳಿವೆ.

Advertisement

ಈಗಾಗಲೇ ಜಿಲ್ಲಾ ಬಿಜೆಪಿ ಮೈದಾನದ ಹುಡುಕಾಟ ನಡೆಸಿದ್ದು, ಶಿರಸಿ ಅಥವಾ ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶಕ್ಕೆ ಸ್ಥಳ ಪರಿಶೀಲನೆ‌ ನಡೆದಿದೆ.

ಉತ್ತರ ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಬದಲಾವಣೆ ಮಾಡಿ ಅನಂತ್ ಕುಮಾರ್ ಹೆಗಡೆ ಅವರಿಗೆ ಟಿಕೆಟ್ ತಪ್ಪಿಸಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಕಣಕ್ಕಿಳಿಸಿದೆ. ಇನ್ನೊಂದೆಡೆ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಪಕ್ಷದ ವಿರುದ್ಧ ಬಂಡಾಯ ಸಾರಿ ಪ್ರಚಾರದಿಂದ ದೂರ ಉಳಿದಿದ್ದಾರೆ. ಕ್ಷೇತ್ರವನ್ನು ಉಳಿಸಿಕೊಳ್ಳುವ ಸಲುವಾಗಿ ಪ್ರಧಾನಿ ಮೋದಿ ಅವರನ್ನು ಕರೆಸಿ ಭರ್ಜರಿ ಪ್ರಚಾರ ನಡೆಸುವ ಸಿದ್ದತೆಗಳು ನಡೆಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next