Advertisement

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

07:34 PM Oct 24, 2021 | Team Udayavani |

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅ.29ರಿಂದ ನ.2ರ ವರೆಗೆ ಇಟಲಿ ಮತ್ತು ಯನೈಟೆಡ್‌ ಕಿಂಗ್‌ಡಮ್‌ ಪ್ರವಾಸ ಕೈಗೊಳ್ಳಲಿದ್ದಾರೆ.

Advertisement

ಅ.30 ಮತ್ತು ಅ.31ರಂದು ಇಟಲಿಯಲ್ಲಿ ನಡೆಯಲಿರುವ 16ನೇ  ಜಿ.20 ರಾಷ್ಟ್ರಗಳ ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಅಫ್ಘಾನಿಸ್ತಾನದಲ್ಲಿ ಉಂಟಾಗಿರುವ ಪರಿಸ್ಥಿತಿಯ ಬಗ್ಗೆ ಜಗತ್ತಿನ ರಾಷ್ಟ್ರಗಳ ಗಮನ ಸೆಳೆಯಲಿದ್ದಾರೆ.  2023ರಲ್ಲಿ ಭಾರತ ಜಿ-20 ರಾಷ್ಟ್ರಗಳ ಸಮ್ಮೇಳನ ಆಯೋಜಿಸಲಿದೆ ಎಂದೂ ಕೇಂದ್ರ ವಿದೇಶಾಂಗ ಸಚಿವಾಲಯ ಭಾನುವಾರ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.

ಬಳಿಕ ಅವರು ಯು.ಕೆ.ಯ ಗ್ಲಾಸ್ಕೋಗೆ ತೆರಳಲಿದ್ದಾರೆ.ಅಲ್ಲಿ ಅವರು ಜಗತ್ತಿನ ಪ್ರಮುಖ ರಾಷ್ಟ್ರಗಳ ನಾಯಕರು ಭಾಗವಹಿಸುವ 26ನೇ ಕಾನ್ಫರೆನ್ಸ್‌ ಆಫ್ ಪಾರ್ಟಿಸ್‌ (ಸಿಒಪಿ-26)ನಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಹವಾವಮಾನ ಬದಲಾವಣೆಯಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಪ್ರಧಾನಿ ಬೆಳಕು ಚೆಲ್ಲಲಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next