Advertisement

PM Modi: ಆಗಸ್ಟ್‌ನಲ್ಲಿ ಮೋದಿ ಉಕ್ರೇನ್‌ ಭೇಟಿ?; ಯುದ್ಧದ ಬಳಿಕ ಮೊದಲ ಪ್ರವಾಸ

09:21 PM Jul 27, 2024 | Team Udayavani |

ನವದೆಹಲಿ: 2022ರಲ್ಲಿ ರಷ್ಯಾ-ಉಕ್ರೇನ್‌ ಯುದ್ಧ ಆರಂಭವಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಮುಂದಿನ ತಿಂಗಳು ಉಕ್ರೇನ್‌ಗೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

ಇತ್ತೀಚೆಗಷ್ಟೇ ಪ್ರಧಾನಿ ಮೋದಿ ರಷ್ಯಾ ಪ್ರವಾಸ ಮಾಡಿದ್ದು, ಪುಟಿನ್‌-ಮೋದಿ ಭೇಟಿ ಬಗ್ಗೆ ಉಕ್ರೇನ್‌ ಅಧ್ಯಕ್ಷ ಝೆಲೆ ನ್‌ಸ್ಕಿ ತೀವ್ರ ಅಸಮಾಧಾನ ಹೊರ ಹಾಕಿದ್ದರು. ಇದರ ಬೆನ್ನಲ್ಲೇ ಆಗಸ್ಟ್‌ನಲ್ಲಿ ಮೋದಿ ಉಕ್ರೇನ್‌ ರಾಜಧಾನಿ ಕೀವ್‌ಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.

ಇಟಲಿಯಲ್ಲಿ ನಡೆದ ಜಿ7 ಶೃಂಗದಲ್ಲಿ ಮೋದಿ ಅವರು ಝೆಲೆನ್‌ಸ್ಕಿ ಅವರನ್ನು ಭೇಟಿಯಾದ ಒಂದು ತಿಂಗಳ ಬಳಿಕ ಈ ವಿಚಾರ ಮುನ್ನೆಲೆಗೆ ಬಂದಿದೆ. ಮೋದಿಯವರು ಲೋಕಸಭಾ ಚುನಾವಣೆಯಲ್ಲಿ ಗೆದ್ದು 3ನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾದ ದಿನ ಉಕ್ರೇನ್‌ ಅಧ್ಯಕ್ಷ ಝೆಲೆನ್ಸ್ಕಿ ಅವರು ಮೋದಿಯವರಿಗೆ ಅಭಿನಂದಿಸಿದ್ದರಲ್ಲದೇ, ಉಕ್ರೇನ್‌ಗೆ ಬರಲು ಆಹ್ವಾನಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next