Advertisement
ಅರುಣಾಚಲ ಪ್ರದೇಶಕ್ಕೆ ತೆರಳಿರುವ ಪ್ರಧಾನಿ ಇಟಾನಗರದಲ್ಲಿ ಆಯೋಜಿಸಲಾಗಿರುವ ವಿಕಸಿತ ಭಾರತ-ವಿಕಸಿತ ಈಶಾನ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. 55600 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಮತ್ತೆ ಅಸ್ಸಾಂನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪಶ್ಚಿಮ ಬಂಗಾಲದ ಸಿಲಿಗುರಿಯಲ್ಲಿನ ಕಾರ್ಯಕ್ರಮದಲ್ಲೂ ಅವರು ಪಾಲ್ಗೊಳ್ಳಲಿದ್ದಾರೆ. ಅನಂತರ ಉ.ಪ್ರ.ದ ವಾರಾಣಸಿಯ ವಿಶ್ವನಾಥ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿ ರೋಡ್ ಶೋ ನಡೆಸಲಿದ್ದಾರೆ.
ಹೊಸದಿಲ್ಲಿ: ಪ್ರಧಾನಿ ಮೋದಿ ಅವರು ಮಾ.10, ರವಿವಾರ ಹುಬ್ಬಳ್ಳಿ ಬೆಳಗಾವಿ, ಕಡಪಾ ವಿಮಾನ ನಿಲ್ದಾಣಗಳ ಹೊಸ ಟರ್ಮಿನಲ್‌ಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಇದಲ್ಲದೆ ಭಾರತೀಯ ವಿಮಾನಯಾನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರವಿವಾರ 10 ಸಾವಿರ ಕೋಟಿ ರೂ. ವೆಚ್ಚದ 15 ವಿಮಾನ ನಿಲ್ದಾಣ ಪ್ರಾಜೆಕ್ಟ್ಗಳಿಗೆ ಚಾಲನೆ ನೀಡಲಿದ್ದಾರೆ.