Advertisement

ಅಂಬೇಡ್ಕರ್‌ ಅವರ ನಿಜವಾದ ಅನುಯಾಯಿ ಮೋದಿ: ಕೋವಿಂದ್‌

07:37 PM Sep 16, 2022 | Team Udayavani |

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಡಾ. ಬಿ.ಆರ್‌.ಅಂಬೇಡ್ಕರ್‌ ಅವರ ನಿಜವಾದ ಅನುಯಾಯಿಯಾಗಿದ್ದು, ಸಮಾಜ ಸುಧಾರಣೆಯ ಅವರ ದೃಷಿಕೋನವನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ ಎಂದು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಹೇಳಿದರು.

Advertisement

ಬ್ಲೂಕಾರ್ಟ್‌ ಡಿಜಿಟಲ್‌ ಫೌಂಡೇಷನ್‌ ಸಂಕಲಿಸಿರುವಂಥ “ಅಂಬೇಡ್ಕರ್‌ ಮತ್ತು ಮೋದಿ: ಸುಧಾರಕರ ಚಿಂತನೆಗಳು, ನಿರ್ವಾಹಕರ ಅನುಷ್ಠಾನ’ ಎಂಬ ಕೃತಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ಶಿಕ್ಷಣ, ಕಾರ್ಮಿಕ ಕಲ್ಯಾಣ, ಮಹಿಳಾ ಸಬಲೀಕರಣ, ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ 370ನೇ ವಿಧಿ ರದ್ದುಗೊಳಿಸಿದ್ದು ಸೇರಿದಂತೆ ಸ್ವಾವಲಂಬಿ ದೇಶ ನಿರ್ಮಾಣ ನಿಟ್ಟಿನಲ್ಲಿ ಪ್ರಧಾನಿ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಇದೇ ವೇಳೆ ಕೋವಿಂದ್‌ ಉಲ್ಲೇಖಿಸಿದರು.

“ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿ ಬಾಬಾಸಾಹೇಬರು, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಪ್ರಸ್ತಾವವನ್ನು ತಿರಸ್ಕರಿಸಿದ್ದರು. ಆದರೆ ನಂತರ ಬಂದ ಸರ್ಕಾರ ಅಂಬೇಡ್ಕರ್‌ ಅವರ ಆಶಯಕ್ಕೆ ವಿರುದ್ಧವಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿತು,’ ಎಂದು ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next