Advertisement

ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ….. ಕನ್ನಡದಲ್ಲಿ ಟ್ವೀಟ್ ಮಾಡಿದ ಪ್ರಧಾನಿ ಮೋದಿ

10:34 AM Jun 20, 2022 | Team Udayavani |

ಬೆಂಗಳೂರು: “ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ, ಬೆಂಗಳೂರು, ಮೈಸೂರು ಕಾರ್ಯಕ್ರಮದಲ್ಲಿ ಭಾಗವಹಿಸುವೆ” ಎಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸಕ್ಕೂ ಮುನ್ನ ಕನ್ನಡದಲ್ಲೇ ಸರಣಿ ಟ್ಬೀಟ್ ಮಾಡಿದ್ದಾರೆ.

Advertisement

ಕರ್ನಾಟಕ ಪ್ರವಾಸ ಸಂದರ್ಭದಲ್ಲಿನ‌ ಕಾರ್ಯಕ್ರಮಗಳ ಬಗ್ಗೆ ಈ ಟ್ವೀಟ್ ನಲ್ಲಿ ವಿವರಿಸಲಾಗಿದ್ದು, ಮೋದಿ ಕನ್ನಡ ಟ್ವೀಟ್ ಗೆ ಈಗ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಬೆಂಗಳೂರಿನ ಕಾರ್ಯಕ್ರಮದಲ್ಲಿ, 27,000 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಇಲ್ಲವೆ ಶಂಕುಸ್ಥಾಪನೆ. ಈ ಕಾಮಗಾರಿಗಳು ವಿವಿಧ ಕ್ಷೇತ್ರಗಳಿಗೆ ಸೇರಿದ್ದು ಬೆಂಗಳೂರಿನ ಹಾಗು ಸುತ್ತಮುತ್ತಲಿನ ಜನರ ‘ಸುಗಮ ಜೀವನ’ಕ್ಕೆ ನೆರವಾಗಲಿದೆ ಎಂದು ಮೋದಿ ಟ್ವೀಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಸಂಜೆ 5.30ರ ವೇಳೆಗೆ ಮೈಸೂರು ತಲುಪುವೆ. ಅಲ್ಲಿಯೂ ಪ್ರಮುಖ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಇಲ್ಲವೆ ಶಿಲಾನ್ಯಾಸ ನೆರವೇರಿಸುವೆ. ಸುತ್ತೂರು ಮಠದ ಕಾರ್ಯಕ್ರಮದಲ್ಲಿಯೂ ಭಾಗಿಯಾಗುವೆ. ನಾಳೆ ಬೆಳಗ್ಗೆ, ಮೈಸೂರಿನಲ್ಲಿ ಯೋಗ ದಿನದ ಕಾರ್ಯಕ್ರಮವೂ ನೆರವೇರಲಿದೆ.

ಇದನ್ನೂ ಓದಿ:ವಿವಾದಕ್ಕೆ ಕಾರಣವಾದ ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಉದ್ಘಾಟನೆ

Advertisement

ಇಂದು ಅಪರಾಹ್ನ, ನಾನು ಡಾ. ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್), ಬೆಂಗಳೂರು ಇಲ್ಲಿ ಬೇಸ್ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಉದ್ಘಾಟನೆ ಮತ್ತು ಡಾ ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯ ಅನಾವರಣ.150 ಟೆಕ್ ಹಬ್ ಗಳ ಲೋಕಾರ್ಪಣೆ ಕೂಡ ಮಾಡುವೆ. ಇವನ್ನು ಐಟಿಐಗಳನ್ನು ಉನ್ನತೀಕರಿಸಿ ಅಭಿವೃದ್ಧಿಗೊಳಿಸಲಾಗಿದೆ ಎಂದು ಟ್ವೀಟರ್ ನಲ್ಲಿ ಪ್ರಧಾನಿ ಮಾಹಿತಿ ಹಂಚಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next