ನವದೆಹಲಿ: ಇಂಡೋನೇಷ್ಯಾದ ಬಾಲಿಯಲ್ಲಿ ನವೆಂಬರ್ ಮಧ್ಯ ಭಾಗದಲ್ಲಿ ನಡೆಯುವ ಜಿ-20 ನಾಯಕರ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬ್ರಿಟನ್ ನೂತನ ಪ್ರಧಾನಿ ರಿಷಿ ಸುನಕ್ ಪರಸ್ಪರ ಭೇಟಿಯಾಗಲಿದ್ದಾರೆ.
“ವಿಶ್ವದ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಎರಡು ಮಹಾನ್ ಪ್ರಜಾಪ್ರಭುತ್ವ ದೇಶಗಳಾಗಿ ಒಟ್ಟಾಗಿ ಕೆಲಸ ಮಾಡಲು ಉಭಯ ನಾಯಕರು ಸಮ್ಮತಿ ಸೂಚಿಸಿದ್ದಾರೆ.
ಇಂಡೋನೇಷ್ಯಾದಲ್ಲಿ ನಡೆಯುವ ಜಿ-20 ಶೃಂಗದಲ್ಲಿ ಪರಸ್ಪರ ಭೇಟಿಯಾಗಲು ಎದುರು ನೋಡುತ್ತಿದ್ದಾರೆ,’ ಎಂದು ಬ್ರಿಟನ್ ಸರ್ಕಾರದ ಪ್ರಕಟಣೆ ತಿಳಿಸಿದೆ.
ಬ್ರಿಟನ್ ಪ್ರಧಾನಿಯಾದ ನಂತರ ಮೊದಲ ಬಾರಿಗೆ ಭಾರತದ ಪ್ರಧಾನಿಯನ್ನು ರಿಷಿ ಸುನಕ್ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.