ಹೊಸದಿಲ್ಲಿ: ಕೋವಿಡ್ 19 ಲಸಿಕೆ ಕುರಿತಂತೆ ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ. ಜನರು ಯಾವುದೇ ಹಿಂಜರಿಕೆ ಇಲ್ಲದೆ ಎಲ್ಲರೂ ಕೋವಿಡ್ ಲಸಿಕೆ ಪಡೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಜನತೆಯಲ್ಲಿ ಮನವಿ ಮಾಡಿದ್ದಾರೆ.
ಮನ್ ಕಿ ಬಾತ್ ನಲ್ಲಿ ಸಂಚಿಕೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ವ್ಯಾಕ್ಸಿನೇಷನ್‌ಗಳ ಮಹತ್ವದ ಬಗ್ಗೆ ಅರಿವು ಮೂಡಿಸುವಂತೆ ಕೇಳುಗರಿಗೆ ಮನವಿ ಮಾಡಿದರು. ಮಧ್ಯಪ್ರದೇಶದ ದುಲಾರಿಯಾ ಗ್ರಾಮಸ್ಥರೊಂದಿಗೆ ಮಾತನಾಡಿದ ಅವರು, ಲಸಿಕೆಯ ಬಗ್ಗೆ ಎಲ್ಲರಲ್ಲಿಯೂ ಅರಿವು ಮೂಡಿಸುವಂತೆ ಹೇಳಿದರು.
ಇದನ್ನೂ ಓದಿ:ದೇಶದಲ್ಲಿ 50 ಸಾವಿರ ಹೊಸ ಸೋಂಕು ಪ್ರಕರಣಗಳು ಪತ್ತೆ, 57 ಸಾವಿರ ಸೋಂಕಿತರು ಗುಣಮುಖ
ಲಸಿಕೆಗಳನ್ನು ತಯಾರಿಸಲು ವಿಜ್ಞಾನಿಗಳು ಮತ್ತು ತಯಾರಕರು ಮಾಡಿದ ಪ್ರಯತ್ನವನ್ನು ಪ್ರಧಾನಿ ಒತ್ತಿ ಹೇಳಿದರು. ಲಸಿಕೆ ಬಗ್ಗೆ ವದಂತಿಗಳನ್ನು ಹಬ್ಬಿಸುತ್ತಿರುವವರು ಅವರ ಪಾಡಿಗೆ ಇರಲಿ ಬಿಡಿ. ನಾವೆಲ್ಲಾ ನಮ್ಮ ಸುತ್ತಲ ಜನರು ಲಸಿಕೆ ಪಡೆಯುವಂತೆ ಕೆಲಸ ಮಾಡೋಣ. ಕೋವಿಡ್-19ನ ಅಪಾಯ ಇನ್ನೂ ಇರುವುದರಿಂದ, ಲಸಿಕಾಕರಣದ ಬಗ್ಗೆ ಹೆಚ್ಚು ಒತ್ತು ನೀಡೋಣ ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸೋಣ’ ಎಂದು ಪ್ರಧಾನಿ ಮೋದಿ ದೇಶದ ಜನರಿಗೆ ಕರೆ ನೀಡಿದರು.
ಇತ್ತೀಚೆಗೆ ನಿಧನರಾದ ಹಾರುವ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಅವರಿಗೆ ನುಡಿ ನಮನ ಸಲ್ಲಿಸಿದ ಮೋದಿ, ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲು ತೆರಳುವ ಎಲ್ಲ ಕ್ರೀಡಾಳುಗಳಿಗೆ ಶುಭ ಹಾರೈಸಿದರು