Advertisement

ಮೋದಿ-ಬೈಡೆನ್ ಮೊದಲ ಮಾತುಕತೆ: ಕೋವಿಡ್19, ಹವಾಮಾನ ಬದಲಾವಣೆ ಸೇರಿದಂತೆ ಹಲವು ವಿಚಾರಗಳ ಚರ್ಚೆ

07:54 AM Nov 18, 2020 | Mithun PG |

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷರಾಗಿ ಚುನಾಯಿತರಾಗಿರುವ  ಜೋ ಬೈಡೆನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಅಮೆರಿಕ ಅಧ್ಯಕ್ಷ ಚುನಾವಣೆಯ ಬಳಿಕ ಇದೇ ಮೊದಲ ಬಾರಿಗೆ ಇಬ್ಬರು ವಿಶ್ವನಾಯಕರು  ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ.

Advertisement

ಈ ಕುರಿತು ಟ್ವೀಟ್ ಮಾಡಿದ ಪ್ರಧಾನಿ ಮೋದಿ “ಯು.ಎಸ್ ಅಧ್ಯಕ್ಷರಾಗಿ ಆಯ್ಕೆಯಾದ ಜೋ ಬೈಡೆನ್ ಅವರೊಂದಿಗೆ ಫೋನ್ ಮೂಲಕ ಮಾತನಾಡಿ ಅಭಿನಂದನೆ ಸಲ್ಲಿಸಿದ್ದೇನೆ. ಇಂಡೋ-ಯುಎಸ್ ಕಾರ್ಯತಂತ್ರದ ಸಹಭಾಗಿತ್ವಕ್ಕೆ ನಮ್ಮ ದೃಢವಾದ ನಿರ್ಧಾರವನ್ನು ತಳೆದಿದ್ದೇವೆ. ಕೋವಿಡ್ -19 ಸಾಂಕ್ರಾಮಿಕ, ಹವಾಮಾನ ಬದಲಾವಣೆ, ಮತ್ತು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಸಹಕಾರ ಸೇರಿದಂತೆ ಉಭಯ ರಾಷ್ಟ್ರಗಳ ಆದ್ಯತೆಯ ಬಗ್ಗೆ ಚರ್ಚಿಸಲಾಗಿದೆ” ಎಂದರು.

ಇದೇ ಸಂದರ್ಭದಲ್ಲಿ ಅಮೆರಿಕ ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಕಮಲಾ ಹ್ಯಾರಿಸ್ ಅವರಿಗೆ ನಾನು ಆತ್ಮೀಯ ಅಭಿನಂದನೆಗಳನ್ನು ತಿಳಿಸಿದ್ದೇನೆ. ಅವರ ಯಶಸ್ಸು ಇಂಡೋ-ಯುಎಸ್ ಸಂಬಂಧಗಳಿಗೆ ಅಪಾರ ಶಕ್ತಿಯ ಮೂಲವಾಗಿದೆ ಮಾತ್ರವಲ್ಲದೆ, ಭಾರತೀಯ-ಅಮೇರಿಕನ್ ಸಮುದಾಯದ ಸದಸ್ಯರಿಗೆ ಹೆಮ್ಮೆ ಮತ್ತು ಸ್ಫೂರ್ತಿಯ ಸಂಗತಿಯಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

Advertisement

ಪ್ರಧಾನಿ ನರೇಂದ್ರ ಮೋದಿ, ಕೊನೆಯ ಬಾರಿಗೆ ಜೋ ಬೈಡೆನ್  ಅವರನ್ನು ವಾಷಿಂಗ್ಟನ್‌ನಲ್ಲಿ ಸೆಪ್ಟೆಂಬರ್ 30, 2014 ರಂದು ಭೇಟಿಯಾಗಿದ್ದರು.  ಈ ವೇಳೆ ಬರಾಕ್ ಒಬಾಮಾ ಅಧ್ಯಕ್ಷರಾಗಿದ್ದರೇ, ಜೋ ಬೈಡೆನ್ ಉಪಾಧ್ಯಕ್ಷರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next