Advertisement

ಕೋವಿಡ್-19: ಪ್ರಧಾನಿ ಮೋದಿ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡ ಸಿಎಂ ಯಡಿಯೂರಪ್ಪ

08:29 AM May 12, 2020 | keerthan |

ಬೆಂಗಳೂರು: ಕೋವಿಡ್-19 ಸೋಂಕು ತಡೆ ಕ್ರಮಗಳು, ಲಾಕ್ ಡೌನ್ ತೆರವು, ಮುಂದೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ  ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

Advertisement

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಚಿವರು ಮತ್ತು ಅಧಿಕಾರಿಗಳ ಜೊತೆಗೆ ಈ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದು, ರಾಜ್ಯದ ಸ್ಥಿತಿಗತಿಯ ಬಗ್ಗೆ ಪ್ರಧಾನ ಮಂತ್ರಿಗಳ ಬಳಿ ಚರ್ಚೆ ನಡೆಸಿದ್ದಾರೆ.

ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ: ಕೆ.ಸುಧಾಕರ್,  ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next