Advertisement

ಚಿಕ್ಕಬಳ್ಳಾಪುರ: ವಾಟದಹೊಸಹಳ್ಳಿ ಗ್ರಾಪಂ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಸಂವಾದ

01:48 PM Apr 24, 2020 | keerthan |

ಚಿಕ್ಕಬಳ್ಳಾಪುರ: ರಾಷ್ಟ್ರದಲ್ಲಿ ಕೋವಿಡ್-19 ಸೋಂಕು ಹರಡದಂತೆ ಸ್ಥಳೀಯ ಗ್ರಾಮ ಪಂಚಾಯತ್ ಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಖುದ್ದು ಗ್ರಾಪಂ ಅಧ್ಯಕ್ಷರೊಂದಿಗೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.

Advertisement

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಗ್ರಾಪಂ ಅಧ್ಯಕ್ಷ ನವೀನ್ ಕುಮಾರ್ ಜೊತೆಗೆ ಸುಮಾರು ಆರು ನಿಮಿಷಗಳ ಕಾಲ ಮಾತನಾಡಿದ ಮೋದಿ ಕೋವಿಡ್-19 ತಡೆಗೆ ಗ್ರಾಪಂ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಗ್ರಾಪಂ ಅಧ್ಯಕ್ಷರು ಕನ್ನಡದಲ್ಲಿ ಹೇಳಿದ್ದನ್ನ ಜಿಪಂ ಸಿಇಒ ಬಿ.ಫೌಜಿಯಾ‌ ತರುನ್ನುಮ್ ಆಂಗ್ಲದಲ್ಲಿ ತರ್ಜುಮೆ ಮಾಡಿದರು.

ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷ‌ ಚಿಕ್ಕನರಸಿಂಹಯ್ಯ ಸೇರಿದಂತೆ ಗ್ರಾಪಂ ಅಧ್ಯಕ್ಷರು,‌ ಅಭಿವೃದ್ದಿ ಅಧಿಕಾರಿಗಳು ಇದ್ದರು. ಇಡೀ‌ ಕರ್ನಾಟಕದಿಂದ ಚಿಕ್ಕಬಳ್ಳಾಪುರ ಜಿಲ್ಲೆಯ‌ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ನವೀನ್ ಕುಮಾರ್ ಮಾತ್ರ ಪ್ರಧಾನಿ ಜೊತೆ ಸಂವಾದಕ್ಕೆ ಆಯ್ಕೆಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next