Advertisement

ನ.11 ರಂದು ಪ್ರಧಾನಿ ಮೋದಿ ಬೆಂಗಳೂರು ಭೇಟಿ: ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ

02:17 PM Oct 27, 2022 | Team Udayavani |

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನ.11 ರಂದು ಬೆಂಗಳೂರಿಗೆ ಆಗಮಿಸಿ ಪಾಲ್ಗೊಳ್ಳಲಿರುವ ಕಾರ್ಯಕ್ರಮಗಳ ಸಿದ್ಧತೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಿದರು.

Advertisement

ಪ್ರಧಾನ ಮಂತ್ರಿಯವರು ತಮ್ಮ ಭೇಟಿಯ ಸಂದರ್ಭದಲ್ಲಿ ಪಾಲ್ಗೊಳ್ಳಲಿರುವ ಕಾರ್ಯಕ್ರಮಗಳ ಸವಿವರ ಮಾಹಿತಿಯನ್ನು ಪಡೆದರು. ತಮ್ಮ ಭೇಟಿಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಅಡಚಣೆಯಾಗದಂತೆ ಸಿದ್ಧತೆ ಕೈಗೊಳ್ಳಲು ಸೂಚಿಸಿದರು.

ಕಾರ್ಯಕ್ರಮದಂದು ಚೆನ್ನೈ ಮೈಸೂರು ನಡುವೆ, ದಕ್ಷಿಣ ಭಾರತದ ಮೊದಲ ಹಾಗೂ ಭಾರತದ ಐದನೇ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಪಿಎಂ ಚಾಲನೆ ನೀಡಲಿದ್ದಾರೆ.

5000 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರ ಉದ್ಘಾಟನೆ ನಡೆಯಲಿದೆ. ವಿಮಾನ ನಿಲ್ದಾಣದ ಆವರಣದಲ್ಲಿರುವ 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಲಿದ್ದು, ನಂತರ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಭೆಯಲ್ಲಿ ರಾಜ್ಯ ಸರ್ಕಾರದ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಐಟಿ, ಬಿಟಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಹಾಗೂ ರೈಲ್ವೆ ಮಂಡಳಿಯ ಅಧಿಕಾರಿಗಳು, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ರಾಜ್ಯ ಸರ್ಕಾರದ ಹಿರಿಯ  ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next