Advertisement

ಫೆ.10ರಂದು ರಾಜ್ಯಕ್ಕೆ ಪಿಎಂ ಮೋದಿ ಭೇಟಿ

06:36 AM Jan 31, 2019 | Team Udayavani |

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಿದ್ಧತಾ ಕಾರ್ಯಗಳ ಬಗ್ಗೆ ಬಿಜೆಪಿ ಗುರುವಾರ ಸಭೆ ಹಮ್ಮಿಕೊಂಡಿದ್ದು, ಫೆಬ್ರವರಿ 10ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಸೇರಿದಂತೆ ಇತರ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.

Advertisement

ಲೋಕಸಭಾ ಚುನಾವಣೆಗೆ ಕೈಗೊಳ್ಳಬೇಕಾದ ಸಿದ್ದತೆಗಳ ಬಗ್ಗೆ ಗುರುವಾರ ಸಭೆ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ಲೋಕಸಭಾ ಕ್ಷೇತ್ರಗಳ ಪ್ರಭಾರಿಗಳು, ಸಹ ಪ್ರಭಾರಿಗಳು, ಎಲ್ಲ ಮೋರ್ಚಾಗಳ ಅಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ. ಜತೆಗೆ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರರಾವ್‌, ರಾಜ್ಯ ಬಿಜೆಪಿ ಚುನಾವಣಾ ಪ್ರಭಾರಿ ಕಿರಣ್‌ ಮಹೇಶ್ವರಿ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯೂ ಆದ ವಿಧಾನ ಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ತಿಳಿಸಿದರು.

ಫೆ.10ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ಆ ಬಗ್ಗೆಯೂ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಲಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಫೆಬ್ರವರಿ ಹಾಗೂ ಮಾರ್ಚ್‌ನಲ್ಲಿ ಕೈಗೊಳ್ಳಬೇಕಾದ ಸಿದ್ಧತೆ ಹಾಗೂ ನಾನಾ ಸಭೆ, ಸಮಾವೇಶ, ರ್ಯಾಲಿಗಳನ್ನು ಆಯೋಜಿಸುವ ಬಗ್ಗೆಯೂ ಸಭೆಯಲ್ಲಿ ಮಾತುಕತೆ ನಡೆಯಲಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next