Advertisement

ನಾಳೆ ಪಿಎಂ ಮೋದಿ ಭೇಟಿ: ಜನರಲ್ಲಿ ಸಂತಸ

03:18 PM May 04, 2018 | |

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ವಿಧಾನಸಭಾ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಶಿವಮೊಗ್ಗಕ್ಕೆ ಇದೇ ಮೇ 5 ರಂದು ಆಗಮಿಸುತ್ತಿದ್ದು, ಮೂರು ದಶಕಗಳ ನಂತರ ದೇಶದ ಪ್ರಧಾನಿಯೊಬ್ಬರು ಮಲೆನಾಡ ಹೆಬ್ಟಾಗಿಲು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿರುವುದು ಜಿಲ್ಲೆಯ ಜನರಲ್ಲಿ
ಸಂತಸಕ್ಕೆ ಕಾರಣವಾಗಿದೆ.

Advertisement

ಈ ಹಿಂದೆ ನರೇಂದ್ರ ಮೋದಿ ಗುಜರಾತ್‌ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಶಿವಮೊಗ್ಗಕ್ಕೆ ಒಮ್ಮೆ ಭೇಟಿ ನೀಡಿದ್ದರು. ಆದರೆ ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿರುವುದು,  ಅವರ ಭೇಟಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ಬೃಹತ್‌ ವೇದಿಕೆ: ಎನ್‌ಇಎಸ್‌ ಮೈದಾನದಲ್ಲಿ ಸಮಾವೇಶಕ್ಕಾಗಿ ಪೂರ್ವಭಾವಿ ಸಿದ್ಧತೆಗಳು ಭರದಿಂದ ಸಾಗಿದ್ದು, ಪ್ರಧಾನಿ ಮೋದಿ ಅವರು ಭಾಷಣ ಮಾಡಲಿರುವ ವೇದಿಕೆ ನಿರ್ಮಾಣ ಕಾರ್ಯಕ್ಕೆ ಗುರುವಾರ ಕೆ.ಎಸ್‌.ಈಶ್ವರಪ್ಪ ಭೂಮಿ ಪೂಜೆ ನೆರವೇರಿಸಿದರು. 

ಸಮಾವೇಶದಲ್ಲಿ ಸುಮಾರು 1 ಲಕ್ಷ ಜನರು ಸೇರುವ ನಿರೀಕ್ಷೆ ಹಿನ್ನೆಲೆಯಲ್ಲಿ ವೇದಿಕೆ ಮುಂಭಾಗ ಬೃಹತ್‌ ಪೆಂಡಾಲ್‌ ಹಾಕಲಾಗುತ್ತಿದೆ. ಈಗಾಗಲೇ ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಮೋದಿ ಆಗಮನದ ಹಿನ್ನೆಲೆಯಲ್ಲಿ ಪ್ರತಿ ಪ್ರತಿ ಮನೆ ಮನೆಗೆ ತೆರಳಿ ಸಾರ್ವಜನಿಕರನ್ನು ಆಹ್ವಾನಿಸಿದ್ದಾರೆ. ಅಲ್ಲದೇ ದೂರವಾಣಿ ಮೂಲಕವು ಸಾವಿರಾರು ಜನರಿಗೆ ಆಹ್ವಾನ ನೀಡಲಾಗಿದೆ. ಜಿಲ್ಲೆಯ ವಿವಿಧ ಕ್ಷೇತ್ರಗಳ ಗಣ್ಯರಿಗೂ ಸಮಾವೇಶಕ್ಕೆ ಆಗಮಿಸುವಂತೆ ಮನವಿ ಮಾಡಲಾಗಿದೆ. 

ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, ಶಿಕಾರಿಪುರ ಕ್ಷೇತ್ರದ ಅಭ್ಯರ್ಥಿ ಬಿ.ಎಸ್‌. ಯಡಿಯೂರಪ್ಪ, ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಕೆ.ಎಸ್‌. ಈಶ್ವರಪ್ಪ ಸೇರಿದಂತೆ ಜಿಲ್ಲೆಯ ವಿವಿಧ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳು, ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ.  

Advertisement

ನರೇಂದ್ರ ಮೋದಿ ಶಿವಮೊಗ್ಗಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಬಿಜೆಪಿಯ ಐಟಿ ಕಾಲ್‌ನಿಂದ ವಿಶಿಷ್ಟ ಪ್ರಯೋಗ ನಡೆಸುತ್ತಿದ್ದು, ಬೆಂಗಳೂರಿನಲ್ಲಿ ನೆಲೆಸಿ, ಅಲ್ಲಿ ಸಾಫ್ಟ್‌ವೇರ್‌ ಇಂಜಿನಿಯರ್ ಹಾಗೂ ಇನ್ನಿತರ ವೃತ್ತಿ ನಿರತ ಶಿವಮೊಗ್ಗದ ಯುವಕ/ಯುವತಿಯರಿಗಾಗಿ ವಿಶೇಷ ಪಾಸ್‌ಗಳನ್ನು ನೀಡುವ ವ್ಯವಸ್ಥೆ ಮಾಡಿಕೊಂಡಿದೆ. ಮೋದಿ ಅವರ ಕಾರ್ಯಕ್ರಮಕ್ಕೆ ಬರಲಿಚ್ಛಿಸುವ ಹೊರ ಊರಿನಲ್ಲಿರುವ ಶಿವಮೊಗ್ಗದವರು 84700 78880ಗೆ ಮಿಸ್‌ಕಾಲ್‌ ಕೊಡುವ ಮೂಲಕ, ಆನ್‌ಲೈನ್‌ ರಿಜಿಸ್ಟ್ರೇಷನ್‌ಗೆ ಅವಕಾಶ ಕಲ್ಪಿಸಿದೆ. ಹೀಗೆ ಆನ್‌ಲೈನ್‌ನಲ್ಲಿ ಹೆಸರು ನೋಂದಾಯಿಸುವವರಿಗೆ, ಮೊದಲು
ಬಂದವರಿಗೆ ಆದ್ಯತೆ ಮೇರೆಗೆ ವಿವಿಐಪಿ ಪಾಸ್‌ ವಿತರಿಸಲಾಗುವುದು. ವಿವರಗಳಿಗೆ ಅವಿನಾಶ್‌ (96637 80004) ಅವರನ್ನು ಸಂಪರ್ಕಿಸಲು ಚುನಾವಣಾ ಜಿಲ್ಲಾ ಮಾಧ್ಯಮ ಸಂಚಾಲಕ ಬಿ.ಆರ್‌. ಮಧುಸೂದನ್‌ ತಿಳಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next