Advertisement

ಪ್ರಧಾನಿ ಮೋದಿಯಿಂದ ಕೆಂಪೇಗೌಡರ ಪ್ರತಿಮೆ ಉದ್ಘಾಟನೆ: ಸಿಎಂ ಬೊಮ್ಮಾಯಿ

03:30 PM Jun 27, 2022 | Team Udayavani |

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸುತ್ತಿರುವ ಕೆಂಪೇಗೌಡರ ಭವ್ಯ‌ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಂದಲ್ಲೇ ಉದ್ಘಾಟಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

Advertisement

ಎಸ್.ಎಂ.ಕೃಷ್ಣ, ಇನ್ಫೋಸಿಸ್ ನಾರಾಯಣಮೂರ್ತಿ, ಪ್ರಕಾಶ್ ಪಡುಕೋಣೆ ಅವರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿದ ಬಳಿಕ ಮಾತನಾಡಿದ ಅವರು, 85 ಕೋಟಿ ರೂ. ವೆಚ್ಚದಲ್ಲಿ ಕೆಂಪೇಗೌಡರ 108 ಅಡಿ ಪ್ರತಿಮೆ ಸ್ಥಾಪನೆ ಮಾಡಲಾಗುವುದು. ಜತೆಗೆ 25 ಕೋಟಿ ರೂ. ವೆಚ್ಚದಲ್ಲಿ ಇನ್ನಿತರ ಮೂಲ ಸೌಕರ್ಯ ಕಲ್ಪಿಸಲಾಗುವುದು. ಈ ಪ್ರತಿಮೆ ದೇಶದಲ್ಲೇ ಅತ್ಯಂತ ಭವ್ಯವಾಗಿ ಇರಲಿದೆ ಎಂದು ಹೇಳಿದರು.

ನಿರ್ಮಲಾನಂದನಾಥ ಸ್ವಾಮೀಜಿಗಳ ಆಗ್ರಹದ ಪ್ರಕಾರ ಮುಂದಿನ ಕೆಂಪೇಗೌಡ ಜಯಂತಿಯ ಒಳಗಾಗಿ ಕೆಂಪೇಗೌಡರ ಪ್ರತಿಮೆಯನ್ನು ವಿಧಾನಸೌಧದಲ್ಲಿ ಸ್ಥಾಪಿಸಲಾಗುವುದು. ಈ ಕೆಲಸ ಎಂದೋ ಆಗಬೇಕಿತ್ತು. ನಾವು ಆ ಕಾರ್ಯವನ್ನು‌ ಮಾಡಿ ಮುಗಿಸುತ್ತೇವೆ. ಕೆಂಪೇಗೌಡರ ಆಶಯದ ಪ್ರಕಾರ ನವ ಬೆಂಗಳೂರು ನಿರ್ಮಾಣಕ್ಕೆ ಕ್ರಮ‌ ತೆಗೆದುಕೊಳ್ಳುತ್ತೇವೆ ಎಂದರು.

ಇದನ್ನೂ ಓದಿ:ಸಾಗರ : ಅಗ್ನಿಪಥ್ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ, 50 ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ

ಆಳುವವರು ಹಾಗೂ ಆಡಳಿತ ಮಾಡುವವರು ಬೇರೆ.‌ ದುರಂತ ಏನೆಂದರೆ ಈಗ ಆಳುವವರು ಆಡಳಿತ ಮಾಡುತ್ತಿದ್ದಾರೆ. ಹೀಗಾಗಿ ಸಮಸ್ಯೆಗಳು ಹಾಗೆಯೇ ಉಳಿದುಕೊಳ್ಳುತ್ತುವೆ ಎಂದು ಅಭಿಪ್ರಾಯಪಟ್ಟರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next