Advertisement
ಈ ವಿಮಾನ ನಿಲ್ದಾಣದ ಶಂಕುಸ್ಥಾಪನೆಯನ್ನು ಪ್ರಧಾನಿ ಮೋದಿ ಅವರು ನವೆಂಬರ್ 2016 ರಲ್ಲಿ ನೆರವೇರಿಸಿದ್ದರು. ಮೂಲಸೌಕರ್ಯ ಕೇಂದ್ರಿತ ಪರಿಕಲ್ಪನೆಯಲ್ಲಿ ನಿರ್ಮಿಸಲಾದ ಈ ವಿಮಾನ ನಿಲ್ದಾಣವನ್ನು ಮೊದಲ ಹಂತದಲ್ಲಿ ಸುಮಾರು 2,870 ಕೋಟಿ ರೂ. ವೆಚ್ಛದಲ್ಲಿ ನಿರ್ಮಿಸಲಾಗಿದೆ. ಮೋಪಾ ವಿಮಾನ ನಿಲ್ದಾಣವು ವರ್ಷಕ್ಕೆ 4.4 ಮಿಲಿಯನ್ ಪ್ರಯಾಣಿಕರ ಸಾಮಥ್ರ್ಯವನ್ನು ಹೊಂದಿರುತ್ತದೆ. ನಂತರದಲ್ಲಿ ಈ ಸಾಮಥ್ರ್ಯ 33 ಮಿಲಿಯನ್‍ಗೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
Related Articles
Advertisement
ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಸುದ್ಧಿಗಾರರಿಗೆ ನೀಡಿದ ಮಾಹಿತಿ ಅನುಸಾರ ಪ್ರಧಾನಿ ಮೋದಿ ಭಾನುವಾರ ಮಧ್ಯಾಹ್ನ ಮೋಪಾ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ. ನಂತರ 9ನೇ ವಿಶ್ವ ಆಯುರ್ವೇದ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು, ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಮೂರು ರಾಷ್ಟ್ರೀಯ ಆಯುಷ್ ಸಂಸ್ಥೆಗಳನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. 9ನೇ ವಿಶ್ವ ಆಯುರ್ವೇದ ಸಮಾವೇಶ ಮತ್ತು ಆರೋಗ್ಯ ಎಕ್ಸ್‌ಪೋದಲ್ಲಿ ವಿಶ್ವದ 50 ದೇಶಗಳಿಂದ 400 ಕ್ಕೂ ಹೆಚ್ಚು ಪ್ರತಿನಿಧಿಗಳು, ಅಂತರರಾಷ್ಟ್ರೀಯ ವಿದ್ಯಾರ್ಥಿಗಳು ಮತ್ತು ಆಯುರ್ವೇದ ವಿಷಯಕ್ಕೆ ಸಂಬಂಧಿಸಿದ ಇತರರು ಭಾಗವಹಿಸಲಿದ್ದಾರೆ. ಆ ಬಳಿಕ ಮೋಪಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಉಧ್ಘಾಟನೆ ನೆರವೇರಿಸಲಿದ್ದಾರೆ.