Advertisement

ಮಾಜಿ ಪ್ರಧಾನಿ ದೇವೇಗೌಡರ ಜನ್ಮದಿನಕ್ಕೆ ಶುಭ ಕೋರಿದ ಪ್ರಧಾನಿ ಮೋದಿ

04:13 PM May 18, 2020 | keerthan |

ಬೆಂಗಳೂರು: ಮಾಜಿ ಪ್ರಧಾನಿ ಎಚ್ ಡಿ ದೇವೇ ಗೌಡರು ಇಂದು ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಮಾಜಿ ಪ್ರಧಾನಿಗಳ ಹುಟ್ಟುಹಬ್ಬಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.

Advertisement

ಈ ಬಗ್ಗೆ ಟ್ಟೀಟ್ ಮಾಡಿರುವ ಅವರು, ಮಾಜಿ ಪ್ರಧಾನಿ ದೇವೇ ಗೌಡರಿಗೆ ಹುಟ್ಟಿದ ದಿನದ ಶುಭಾಶಯಗಳು. ದೀರ್ಘ ಜೀವನ ಮತ್ತು ಉತ್ತಮ ಆರೋಗ್ಯ ನಿಮ್ಮದಾಗಲಿ ಎಂದು ಹಾರೈಸಿದ್ದಾರೆ.

ದೇವೇಗೌಡರ ಪುತ್ರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಟ್ವೀಟ್ ಮಾಡಿದ್ದು, ದೇಶದ ಅತ್ಯುನ್ನತ, ಅಸಾಮಾನ್ಯ ಹುದ್ದೆಯನ್ನು ಸಾಮಾನ್ಯನೂ ಅಲಂಕರಿಸಬಹುದು ಎಂಬುದು ಭಾರತದ ಪ್ರಜಾಪ್ರಭುತ್ವದ ಸೌಂದರ್ಯ. ಈ ಮಾತನ್ನು, ಹಳ್ಳಿಯ ಮಣ್ಣಿಂದ ಬಂದು, ರಾಷ್ಟ್ರೀಯ ಪಕ್ಷದ ಹಿನ್ನೆಲೆ ಇಲ್ಲದೇ ಸಾಧಿಸಿ ತೋರಿಸಿದವರು ದೇವೇ ಗೌಡರು. ಬದ್ಧತೆ, ಛಲ, ಪರಿಶ್ರಮ, ಹೋರಾಟ ಮತ್ತು ನಾಡಿಗೆ ಹೆಗ್ಗುರುತಾಗಿರುವ ಅವರ ಜನ್ಮದಿನಕ್ಕೆ ಶುಭಾಶಯಗಳು ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next