ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಶುಭಾಶಯ ಕೋರಿದ್ದು, ಅವರ ಅಧಿಕಾರಾವಧಿ ಫಲಪ್ರದವಾಗಲಿ ಎಂದು ಹಾರೈಸಿದ್ದಾರೆ.
Advertisement
ಕಾಂಗ್ರೆಸ್ ಅಧ್ಯಕ್ಷರಾಗಿ ಹೊಸ ಜವಾಬ್ದಾರಿ ವಹಿಸಿಕೊಂಡ ಮಲ್ಲಿಕಾರ್ಜುನ ಖರ್ಗೆ ಜಿ ಅವರಿಗೆ ನನ್ನ ಶುಭಾಶಯಗಳು. ಮುಂದೆ ಅವರು ಫಲಪ್ರದವಾದ ಅಧಿಕಾರಾವಧಿಯನ್ನು ಹೊಂದಲಿ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಶಶಿ ತರೂರ್ ಅವರನ್ನು ಸೋಲಿಸಿ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪಕ್ಷಾತೀತವಾಗಿ ರಾಜಕಾರಣಿಗಳು ಶುಭ ಕೋರಿದ್ದಾರೆ.