Advertisement

Speedy Recovery: ಕಿಂಗ್ ಚಾರ್ಲ್ಸ್ ಶೀಘ್ರ ಗುಣಮುಖರಾಗಲಿ… ಪ್ರಧಾನಿ ಮೋದಿ ಹಾರೈಕೆ

01:18 PM Feb 06, 2024 | Team Udayavani |

ನವದೆಹಲಿ: ಕ್ಯಾನ್ಸರ್ ನಿಂದ ಬಳಲುತ್ತಿರುವ ಬ್ರಿಟನ್ ದೊರೆ 3ನೇ ಚಾರ್ಲ್ಸ್ ಶೀಘ್ರ ಗುಣಮುಖರಾಗಲಿ ಮತ್ತು ಉತ್ತಮ ಆರೋಗ್ಯವನ್ನು ಪಡೆಯಲಿ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹಾರೈಸಿದ್ದಾರೆ.

Advertisement

ಲಂಡನ್‌ನಲ್ಲಿರುವ ಬ್ರಿಟಿಷ್ ರಾಜಮನೆತನದ ಅಧಿಕೃತ ನಿವಾಸವಾದ ಬಕಿಂಗ್‌ಹ್ಯಾಮ್ ಪ್ಯಾಲೇಸ್ ಸೋಮವಾರ ನೀಡಿದ ಹೇಳಿಕೆಯಲ್ಲಿ ಚಾರ್ಲ್ಸ್ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದ್ದು ಅಲ್ಲದೆ ಅವರಿಗೆ ಅರಮನೆಯಲ್ಲೇ ವೈದ್ಯಕೀಯ ಚಿಕಿತ್ಸೆಗಳನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ ಎನ್ನಲಾಗಿದೆ.

ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಚಾರ್ಲ್ಸ್ ಅವರಿಗೆ ಕ್ಯಾನ್ಸರ್ ಇರುವುದನ್ನು ದೃಢಪಡಿಸಿದ್ದಾರೆ ಇದರ ಬೆನ್ನಲ್ಲೇ ಸೋಮವಾರದಿಂದ ಅವರಿಗೆ ಚಿಕಿತ್ಸೆ ನೀಡಲು ವೈದ್ಯರು ಆರಂಭಿಸಿದ್ದಾರೆ ಎಂದು ಹೇಳಲಾಗಿದೆ.

ಚಾರ್ಲ್ಸ್ ಅವರಿಗೆ ಕ್ಯಾನ್ಸರ್ ಇರುವ ವಿಚಾರ ಗೊತ್ತಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಚಾರ್ಲ್ಸ್ ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು X ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅದರಂತೆ “ಕಿಂಗ್ ಚಾರ್ಲ್ಸ್ III ಅವರ ಶೀಘ್ರ ಚೇತರಿಕೆ ಮತ್ತು ಉತ್ತಮ ಆರೋಗ್ಯವನ್ನು ಬಯಸುವ ಭಾರತದ ಜನರೊಂದಿಗೆ ನಾನು ಕೂಡ ಸೇರುತ್ತೇನೆ” ಎಂದು ಪ್ರಧಾನಿ ನರೇಂದ್ರ ಮೋದಿ ಪೋಸ್ಟ್ ಮಾಡಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next