ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅಗಲಿಕೆಯ ಬೇಸರದಲ್ಲೇ ರಾಜ್ಯ ಸರ್ಕಾರ ಸರಳವಾಗಿ ಕನ್ನಡ ರಾಜ್ಯೋತ್ಸವ ಆಚರಿಸುತಿದ್ದು, 66ನೇ ಕನ್ನಡ ರಾಜ್ಯೋತ್ಸವಕ್ಕೆ ಗಣ್ಯರು ಶುಭಾಶಯ ಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿ ಶುಭಾಶಯ ಕೋರಿದ್ದು, ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮ ಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ ಎಂದು ಹಾರೈಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ‘ನಾಡಿನ ಸಮಸ್ತ ಜನತೆಗೆ 66ನೇ ಕನ್ನಡ ರಾಜ್ಯೋತ್ಸವದ ಹೃತ್ಪೂರ್ವಕ ಶುಭಕಾಮನೆಗಳು. ನಾಡಿನ ಏಕತೆ, ಸ್ವಾಭಿಮಾನ, ಸಾಮರಸ್ಯ, ಸಹಬಾಳ್ವೆಯ ಸಂಕೇತವಾದ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆಯ ಆಚರಣೆ. ನಮ್ಮ ಕನ್ನಡದ ಅಸ್ಮಿತೆ ಸದಾ ಜಾಗೃತವಾಗಿರಲಿ, ಕನ್ನಡತನದ ಅಭಿಮಾನ ನಿರಂತರವಾಗಿರಲಿ” ಎಂದು ತಿಳಿಸಿದ್ದಾರೆ.
Related Articles
Advertisementಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು , ‘ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡ ನಾಡು, ನುಡಿ, ಜನಪದ, ಇತಿಹಾಸ, ಪರಂಪರೆ, ಸಂಸ್ಕೃತಿಗಳನ್ನು ಉಳಿಸುವ, ಬೆಳೆಸುವ ದೃಢ ಸಂಕಲ್ಪ ನಮ್ಮದಾಗಿರಲಿ. ಸಮೃದ್ಧ, ಆರೋಗ್ಯಪೂರ್ಣ, ಪ್ರಗತಿಶೀಲ ನವಕರ್ನಾಟಕದ ನಿರ್ಮಾಣದ ನಿಟ್ಟಿನಲ್ಲಿ ನಮ್ಮ ಕರ್ತವ್ಯಗಳನ್ನು ನಿರ್ವಹಿಸೋಣ’ ಎಂದು ಕೂ ಮಾಡಿದ್ದಾರೆ.
#ಕನ್ನಡರಾಜ್ಯೋತ್ಸವ
– BS Yediyurappa (@bsybjp) 1 Nov 2021