Advertisement

PM Modi ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಜೋಹಾನ್ಸ್‌ಬರ್ಗ್‌ನಲ್ಲಿ ಸಭೆ?

08:13 PM Aug 21, 2023 | Team Udayavani |

ಹೊಸದಿಲ್ಲಿ: ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ದ್ವಿಪಕ್ಷೀಯ ಸಭೆಗಳನ್ನು ಅಂತಿಮಗೊಳಿಸಲಾಗುತ್ತಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಸೋಮವಾರ ಹೇಳಿದ್ದಾರೆ. ಆದರೆ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಡುವಿನ ಭೇಟಿಯ ಸಾಧ್ಯತೆಯ ಬಗ್ಗೆ ನೇರ ಉತ್ತರವನ್ನು ನೀಡಲಿಲ್ಲ.

Advertisement

ಕೋವಿಡ್ ಕಾಲದ ನಂತರ ಬ್ರಿಕ್ಸ್ (ಬ್ರೆಜಿಲ್-ರಷ್ಯಾ-ಭಾರತ-ಚೀನಾ-ದಕ್ಷಿಣ ಆಫ್ರಿಕಾ) ದ ಮೊದಲ ವೈಯಕ್ತಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮೂರು ದಿನಗಳ ಭೇಟಿಗಾಗಿ ಪ್ರಧಾನಿ ಮೋದಿ ಮಂಗಳವಾರ ದಕ್ಷಿಣ ಆಫ್ರಿಕಾಕ್ಕೆ ತೆರಳುತ್ತಿದ್ದಾರೆ.

ಶೃಂಗಸಭೆಯ ಹಿನ್ನೆಲೆಯಲ್ಲಿ ಮೋದಿ ಮತ್ತು ಕ್ಸಿ ಮಾತುಕತೆ ನಡೆಸುತ್ತಾರೆಯೇ ಎಂದು ಮಾಧ್ಯಮಗೋಷ್ಠಿಯಲ್ಲಿ ಕೇಳಿದ ಪ್ರಶ್ನೆಗೆ, ವಿದೇಶಾಂಗ ಕಾರ್ಯದರ್ಶಿ ಕ್ವಾತ್ರಾ, ಪ್ರಧಾನಿಯವರ ದ್ವಿಪಕ್ಷೀಯ ಸಭೆಗಳ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗುತ್ತಿದೆ ಎಂದಷ್ಟೇ ಹೇಳಿದರು.

ದ್ವಿಪಕ್ಷೀಯ ಸಭೆ ನಡೆದರೆ, ಮೇ 2020 ರಲ್ಲಿ ಪೂರ್ವ ಗಡಿ ಬಿಕ್ಕಟ್ಟು ಪ್ರಾರಂಭವಾದ ನಂತರ ಇದು ಅವರ ಮೊದಲನೆಯ ಸಭೆಯಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next